ADVERTISEMENT

ಉತ್ತರ ಕನ್ನಡ: ಜಿಲ್ಲಾದ್ಯಂತ ಮುಂದುವರಿದ ಮಳೆ, ಧರೆಗುರುಳಿದ ಬೃಹತ್ ಮರ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 7:18 IST
Last Updated 13 ಜುಲೈ 2021, 7:18 IST
ಧರೆಗುರುಳಿದ ಕುಮಟಾದ ಐ.ಸಿ.ಐ.ಸಿ ಬ್ಯಾಂಕ್ ಪಕ್ಕದ ಬೃಹತ್ ಆಲದ ಮರ
ಧರೆಗುರುಳಿದ ಕುಮಟಾದ ಐ.ಸಿ.ಐ.ಸಿ ಬ್ಯಾಂಕ್ ಪಕ್ಕದ ಬೃಹತ್ ಆಲದ ಮರ   

ಕಾರವಾರ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಜೋರು ಮಳೆ ಮುಂದುವರಿದಿದೆ.ಕುಮಟಾದ ಐ.ಸಿ.ಐ.ಸಿ ಬ್ಯಾಂಕ್ ಪಕ್ಕದ ಬೃಹತ್ ಆಲದ ಮರ ಮಂಗಳವಾರ ಬೆಳಗಿನ ಜಾವ ಧರೆಗುರುಳಿತು.

ಇದರಿಂದ ಹಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಬೆಳಗಿನ ಜಾವ ಮರ ಬಿದ್ದ ಕಾರಣ, ಯಾರಿಗೂ ಯಾವುದೇ ವಾಹನಗಳಿಗೂ ಹಾನಿಯಾಗಿಲ್ಲ. ನಂತರ ಪುರಸಭೆ ನೌಕರರು, ಅಗ್ನಿ ಶಾಮಕದಳದ ಸಿಬ್ಬಂದಿ ಮರವನ್ನು ತೆರವು ಮಾಡಿದರು.

ಅರಬ್ಬಿ ಸಮುದ್ರ ಮತ್ತಷ್ಟು ಪ್ರಕ್ಷುಬ್ಧಗೊಂಡಿದ್ದು, ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಾರವಾರದ ದೇವಭಾಗ, ರವೀಂದ್ರನಾಥ ಟ್ಯಾಗೋರ್ ಕಡಲತೀರ, ಹೊನ್ನಾವರದ ವಿವಿಧೆಡೆ ಕಡಲ್ಕೊರೆತ ತೀವ್ರಗೊಂಡಿದೆ.

ADVERTISEMENT

ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಶಿರಸಿ, ಯಲ್ಲಾಪುರ, ಸಿದ್ದಾಪುರ ಮುಂತಾದೆಡೆ ಮಳೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.