ADVERTISEMENT

ಗೋಕರ್ಣ: ಹೆಲ್ಮೆಟ್ ಜಾಗೃತಿಗೆ ಪೊಲೀಸರಿಂದ ಬೈಕ್‌ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2025, 4:34 IST
Last Updated 14 ಸೆಪ್ಟೆಂಬರ್ 2025, 4:34 IST
ಗೋಕರ್ಣದಲ್ಲಿ ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ನೇತೃತ್ವದಲ್ಲಿ ಹೆಲ್ಮೆಟ್ ಜಾಗೃತಿ ಮೂಡಿಸಲು ಬೈಕ್ ರ‍‍್ಯಾಲಿ ನಡೆಸಲಾಯಿತು
ಗೋಕರ್ಣದಲ್ಲಿ ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ನೇತೃತ್ವದಲ್ಲಿ ಹೆಲ್ಮೆಟ್ ಜಾಗೃತಿ ಮೂಡಿಸಲು ಬೈಕ್ ರ‍‍್ಯಾಲಿ ನಡೆಸಲಾಯಿತು   

ಗೋಕರ್ಣ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಗೋಕರ್ಣ ಠಾಣಾ ನಿರೀಕ್ಷಕ ಶ್ರೀಧರ ಎಸ್.ಆರ್. ಶುಕ್ರವಾರ ಬೈಕ್ ರ‍್ಯಾಲಿ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

‘ಜೀವ ಮತ್ತು ಜೀವನ ಅಮೂಲ್ಯವಾದದು. ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು ಎಂದು ತಿಳಿಸಿದರು.

ಪ್ರವಾಸಿ ತಾಣ ಗೋಕರ್ಣಕ್ಕೆ ಬರುವ ಪ್ರವಾಸಿಗರಿಗೆ ಬಾಡಿಗೆ ಬೈಕ್‌ ನೀಡುವ ಮಾಲೀಕರು ಬಾಡಿಗೆ ಪಡೆದ ಬೈಕ್‌ ಸವಾರರಿಗೆ ಹಾಗೂ ಹಿಂಬದಿಯ ಸವಾರರಿಗೂ ಹೆಲ್ಮೆಟ್‌ ಕಡ್ಡಾಯವಾಗಿ ಒದಗಿಸುವುದು ಕರ್ತವ್ಯ ಎಂದು ಸಲಹೆ ನೀಡಿದರು.

ನಂತರ ಮೇಲಿನಕೇರಿಯಿಂದ ಊರಿನ ಪ್ರಮುಖ ರಸ್ತೆಗಳಲ್ಲಿ ಶ್ರೀಧರ ಅವರ ನೇತೃತ್ವದಲ್ಲಿ ಬೈಕ್ ರ‍್ಯಾಲಿ ನಡೆಸಲಾಯಿತು. ಪಿ.ಎಸ್.ಐ. ಖಾದರ ಭಾಷಾ ಮತ್ತು ಶಶಿಧರ್ ಕೆ.ಎಚ್. ಪೊಲೀಸ್ ಸಿಬ್ಬಂದಿ, ರೆಸಾರ್ಟ್ ಮಾಲೀಕರು ಮತ್ತು ಬೈಕ್ ಬಾಡಿಗೆ ಕೊಡುವವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.