ಕಾರವಾರ ಬಳಿಯ ಕೋಡಿಬಾಗದಲ್ಲಿರುವ ಕಾಳಿ ಸೇತುವೆಯು ಮಂಗಳವಾರ ತಡರಾತ್ರಿ ಕುಸಿದು ಬಿದ್ದಿದೆ.
ಪ್ರಜಾವಾಣಿ ಚಿತ್ರ: ದಿಲೀಪ್ ರೇವಣಕರ್
ರಾತ್ರಿ 1 ಗಂಟೆ ವೇಳೆಗೆ ಕಾಳಿ ನದಿಯ ಹಳೆಯ ಸೇತುವೆಯು ಮೂರು ಕಡೆಗಳಲ್ಲಿ ಏಕಾಏಕಿ ಮುರಿದು ಬಿದ್ದಿದೆ
ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರಲ್ಲಿನ ಕಾಳಿ ನದಿಗೆ ಎರಡು ಸೇತುವೆಗಳಿವೆ. ಗೋವಾ ಕಡೆಯಿಂದ ಕಾರವಾರದತ್ತ ವಾಹನಗಳು ಸಂಚರಿಸುತ್ತಿದ್ದ ಸೇತುವೆಯು ಮುರಿದು ಬಿದ್ದಿದೆ
ಈ ಸೇತುವೆಯನ್ನು 1983ರಲ್ಲಿ ನಿರ್ಮಿಸಲಾಗಿತ್ತು.
ಸೇತುವೆ ಕುಸಿದುಬಿದ್ದ ಪರಿಣಾಮ ಲಾರಿಯೊಂದು ನದಿ ಪಾಲಾಗಿದೆ.
2009ರಲ್ಲಿ ಸೇತುವೆಯ ಸಂಪೂರ್ಣ ದುರಸ್ತಿಗೆ ಪ್ರಯತ್ನಿಸಲಾಗಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಭಾಗಶಃ ಮಾತ್ರ ದುರಸ್ತಿ ನಡೆಸಲಾಗಿತ್ತು
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರವಾರದಿಂದ ಗೋವಾ ಕಡೆಗೆ ವಾಹನ ಸಂಚಾರ ಸ್ಥಗಿತಗೊಂಡಿದೆ.
2018ರಲ್ಲಿ ಇದೇ ಸೇತುವೆ ಪಕ್ಕದಲ್ಲಿ ಇನ್ನೊಂದು ಸೇತುವೆಯನ್ನು ನಿರ್ಮಿಸಲಾಗಿದೆ.
ಸುರಕ್ಷತೆ ದೃಷ್ಟಿಯಿಂದ ಸದ್ಯ ಹೊಸ ಸೇತುವೆಯ ಮೇಲೆ ಸಂಚಾರ ನಿರ್ಬಂಧಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.