ಶಿರಸಿ: ಇಲ್ಲಿನ ಹೆಸ್ಕಾಂ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಿಯ ಎಂಜಿನಿಯರ್ ಸುರೇಶ ಅರಳೇಶ್ವರ (45) ಬುಧವಾರ ರಾತ್ರಿ ವಾಹನಕ್ಕೆ ಬಳಸುವ ಆಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಯಿಲ್ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು ಎಂದು ಹೊಸಮಾರುಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ. ಅನರೋಗ್ಯದಿಂದ ಅವರು ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.