ADVERTISEMENT

ವೈದ್ಯಕೀಯ ಕಾಲೇಜಿಗೆ ಪ್ರವೇಶಾತಿ ಅಬಾಧಿತ

ಎಂಸಿಐ ನಿರ್ಧಾರದ ವಿರುದ್ಧ ಹೈಕೋರ್ಟ್ ಮಧ್ಯಂತರ ಆದೇಶ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 15:32 IST
Last Updated 24 ಜೂನ್ 2019, 15:32 IST

ಕಾರವಾರ: ಇಲ್ಲಿನ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ 2019–20ನೇ ಸಾಲಿನಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆಯ ಕಾರಣ ಮುಂದಿಟ್ಟು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಎಂಬಿಬಿಎಸ್ ಕೋರ್ಸ್‌ಗೆ ಅನುಮತಿ ನಿರಾಕರಿಸಿತ್ತು. ಇದರ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು, ವಿದ್ಯಾರ್ಥಿಗಳಪ್ರವೇಶಾತಿಗೆ ಅನುಮತಿ ನೀಡಿತು ಎಂದು ಸರ್ಕಾರಿ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ಶಿವಾನಂದ ದೊಡ್ಮನಿ ತಿಳಿಸಿದ್ದಾರೆ.

ರಾಜ್ಯದ ಒಂಬತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪರಿಶೀಲಿಸಿದ್ದ ಎಂಸಿಐ, ಏಳು ಕಾಲೇಜುಗಳಿಗೆ ಅನುಮತಿ ನೀಡಿತ್ತು. ಕಾರವಾರ ಹಾಗೂ ಬೀದರ್ ಕಾಲೇಜುಗಳನ್ನು ಸಿಇಟಿ ಸೀಟ್ ಮ್ಯಾಟ್ರಿಕ್ಸ್‌ನಿಂದ ಹೊರಗಿಡಲಾಗಿತ್ತು. ಕಾಲೇಜಿನಲ್ಲಿರುವ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವುದಾಗಿ ಸರ್ಕಾರ ಎಂಸಿಐಗೆ ಅಫಿಡವಿಟ್ ನೀಡಿದೆ. ಆದರೂ ಪ್ರವೇಶ ನಿರಾಕರಿಸಿದ್ದರಿಂದ ಕಾಲೇಜಿನ ಭವಿಷ್ಯದ ಬಗ್ಗೆ ಅನುಮಾನ ಮೂಡಿತ್ತು. ಹೈಕೋರ್ಟ್‌ನ ಆದೇಶದಿಂದ ಕಾಲೇಜಿನ ಪ್ರವೇಶಾತಿ ಪ್ರಕ್ರಿಯೆ ಈ ವರ್ಷಕ್ಕೆ ಅಬಾಧಿತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.