ಸಾವು (ಪ್ರಾತಿನಿಧಿಕ ಚಿತ್ರ)
ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ): ತಾಲ್ಲೂಕಿನ ಕಾಸರಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟ್ಟೆ ವಿನಾಯಕ ಕೇರಿಯಲ್ಲಿ ಭಾನುವಾರ ರಾತ್ರಿ ವಿದ್ಯುತ್ ತಂತಿ ಸ್ಪರ್ಶಿಸಿ, ದಂಪತಿ ಮೃತಪಟ್ಟಿದ್ದಾರೆ.
ಸಂತೋಷ ಗೌಡ (55), ಸೀತಾ ಗೌಡ (43) ಮೃತರು. ಅವರ ಮಗನಿಗೆ ಪೆಟ್ಟಾಗಿದೆ. ಮನೆ ಬಳಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತುಳಿದು ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಅಪಾಯಕಾರಿ ರೀತಿ ವಿದ್ಯುತ್ ತಂತಿ ಬಿದ್ದಿರುವುದನ್ನು ಹೆಸ್ಕಾಂ ಗಮನಕ್ಕೆ ತರಲಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಂಪತಿ ಬಲಿಯಾದರು’ ಎಂದು ಮೃತರ ಸಂಬಂಧಿಕರು ಆರೋಪಿಸಿ, ಪ್ರತಿಭಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.