ADVERTISEMENT

ಹೊನ್ನಾವರ: ರೈಲಿನಿಂದ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 4:28 IST
Last Updated 10 ಡಿಸೆಂಬರ್ 2025, 4:28 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಹೊನ್ನಾವರ: ತಾಲ್ಲೂಕಿನ ದುಗ್ಗೂರು ರೈಲು ಗೇಟಿನ ಸಮೀಪ ಸೋಮವಾರ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಪ್ರಭಾತನಗರದ ನಿವಾಸಿ ಮೆಲ್ವೀನ್ ಪೆದ್ರೂ ಅಲ್ಮೇಡಾ (19) ಮೃತ ವ್ಯಕ್ತಿ. ಘಟನೆಗೆ ಸಂಬಂಧಿಸಿ ವ್ಯಕ್ತಿಯ ಅಣ್ಣ ಇಲ್ಲಿಯ ಪೊಲೀಸರಿಗೆ ದೂರು ನೀಡಿದ್ದಾರೆ.

‘ಗೋವಾದಲ್ಲಿ ಹೋಟೆಲ್‌ನಲ್ಲಿ ಕೆಲಸಕ್ಕಿದ್ದ ಮೆಲ್ವೀನ್ ರೈಲಿನಲ್ಲಿ ಊರಿಗೆ ಬರುತ್ತಿದ್ದರು. ಕರ್ಕಿ ನಿಲ್ದಾಣದಲ್ಲಿ ಇಳಿಯುವ ಬದಲು ದುಗ್ಗೂರು ಗೇಟಿನ ಸಮೀಪ ಚಲಿಸುತ್ತಿದ್ದ ರೈಲಿನಿಂದ ಇಳಿದು ಗಾಯಗೊಂಡು ಮೃತಪಟ್ಟಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.