ADVERTISEMENT

ಹೊನ್ನಾವರ: ಬಾವಿಗೆ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 5:52 IST
Last Updated 4 ಸೆಪ್ಟೆಂಬರ್ 2025, 5:52 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಹೊನ್ನಾವರ: ತಾಲ್ಲೂಕಿನ ಹೆರಂಗಡಿ ಗ್ರಾಮದ ಅಳ್ಳಂಕಿಯಲ್ಲಿ ವ್ಯಕ್ತಿಯೊಬ್ಬರು ಮಂಗಳವಾರ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಅಳ್ಳಂಕಿಯ ಸುಭಾಸ ಪಾಂಡುರಂಗ ಶಾನಭಾಗ(62) ಮೃತರು. ಕಿರಾಣಿ ವ್ಯಾಪಾರಿ ಹಾಗೂ ರೈತರಾಗಿದ್ದ ಸುಭಾಸ,  ತಮ್ಮ ಮನೆಯ ತೋಟದ ಬಾವಿಯಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಇಲ್ಲಿನ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.