
ಪ್ರಜಾವಾಣಿ ವಾರ್ತೆ
ಬಂಧನ
(ಪ್ರಾತಿನಿಧಿಕ ಚಿತ್ರ)
ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ): ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೂವರು ಯುವಕರ ವಿರುದ್ಧ ಹೊನ್ನಾವರ ಠಾಣೆ ಪೊಲೀಸರು ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಶುಕ್ರವಾರ ಬಂಧಿಸಿದ್ದಾರೆ.
‘ಮಾವಿನಕುರ್ವದ ಅಭಿ ಗೌಡ (22), ಕವಲಕ್ಕಿಯ ಹೇಮಂತ ನಾಯ್ಕ (21) ಮತ್ತು ಗೇರುಸೊಪ್ಪದ ದೇವೇಂದ್ರ ನಾಯ್ಕ (26) ಬಂಧಿತರು. ಬಾಲಕಿ ಗರ್ಭಿಣಿಯಾದ ಬಳಿಕ ಕೃತ್ಯ ಗೊತ್ತಾಗಿದೆ. ಪಾಲಕರು ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.