ADVERTISEMENT

ಮುಂಡಗೋಡ | ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 25 ಮೇ 2025, 13:50 IST
Last Updated 25 ಮೇ 2025, 13:50 IST
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಂಡಗೋಡದ ಸಿ.ಎಂ ಶಿಕ್ಷಣ ಸಂಸ್ಥೆ ಹಾಗೂ ಸಿ.ಎಂ ಕೋಚಿಂಗ್ ಅಕಾಡೆಮಿ ವತಿಯಿಂದ ಶನಿವಾರ ಸನ್ಮಾನಿಸಲಾಯಿತು
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಂಡಗೋಡದ ಸಿ.ಎಂ ಶಿಕ್ಷಣ ಸಂಸ್ಥೆ ಹಾಗೂ ಸಿ.ಎಂ ಕೋಚಿಂಗ್ ಅಕಾಡೆಮಿ ವತಿಯಿಂದ ಶನಿವಾರ ಸನ್ಮಾನಿಸಲಾಯಿತು   

ಮುಂಡಗೋಡ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಇಲ್ಲಿನ ಸಿ.ಎಂ ಶಿಕ್ಷಣ ಸಂಸ್ಥೆ ಹಾಗೂ ಸಿ.ಎಂ ಕೋಚಿಂಗ್ ಅಕಾಡೆಮಿ ವತಿಯಿಂದ ಶನಿವಾರ ಸನ್ಮಾನಿಸಲಾಯಿತು.

‘ವಿದ್ಯಾರ್ಥಿ ಜೀವನದಲ್ಲಿ ಎಸ್ಎಸ್ಎಲ್‌ಸಿ ಪ್ರಮುಖ ಘಟ್ಟವಾಗಿದ್ದು, ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನದಿಂದ ಉತ್ತಮ ಅಂಕ ಗಳಿಸಬಹುದು. ವಿದ್ಯಾರ್ಥಿಗಳು ಮಾಡುವ ತಪ್ಪನ್ನು ಪ್ರೀತಿಯಿಂದ ತಿದ್ದಿ, ಅವರಲ್ಲಿರುವ ಭಯವನ್ನು ಹೋಗಲಾಡಿಸಬೇಕು’ ಎಂದು ತರಬೇತಿ ಕೇಂದ್ರದ ಮುಖ್ಯಸ್ಥೆ ಶಾರದಾ ತಟ್ಟಿ ಹೇಳಿದರು.

ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೃಷ್ಣ ಕುಲ್ಲೂರ, ಚನ್ನಪ್ಪ ತಟ್ಟಿ, ತೇಜಸ್ವಿನಿ ಸುಣಗಾರ, ಮಹಾಂತೇಶ ತಿರಕಣ್ಣನವರ, ಪ್ರವೀಣಕುಮಾರ, ಸಂತೋಷ ಶೆಟ್ಟಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.