ADVERTISEMENT

ಕಾರವಾರ: ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಸಾಧ್ಯತೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 11:33 IST
Last Updated 22 ಅಕ್ಟೋಬರ್ 2022, 11:33 IST
ಕಾರವಾರದ ಮಾಲಾದೇವಿ ಮೈದಾನದಲ್ಲಿ ತುರ್ತು ಸಂದರ್ಭಗಳಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡುವ ಸಾಧ್ಯತೆಯ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಶನಿವಾರ ಪರಿಶೀಲಿಸಿದರು
ಕಾರವಾರದ ಮಾಲಾದೇವಿ ಮೈದಾನದಲ್ಲಿ ತುರ್ತು ಸಂದರ್ಭಗಳಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡುವ ಸಾಧ್ಯತೆಯ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಶನಿವಾರ ಪರಿಶೀಲಿಸಿದರು   

ಕಾರವಾರ: ಭಾರತೀಯ ಕೋಸ್ಟ್‌ಗಾರ್ಡ್‌ನ ಸಿಬ್ಬಂದಿ ಶನಿವಾರ, ನಗರದ ಮಾಲಾದೇವಿ ಮೈದಾನದಲ್ಲಿ ಹೆಲಿಕಾಪ್ಟರ್‌ನ ತುರ್ತು ಲ್ಯಾಂಡಿಂಗ್ ಸಾಧ್ಯತೆಗಳನ್ನು ಪರಿಶೀಲಿಸಿದರು. ಇದ್ದಕ್ಕಿದ್ದಂತೆ ಮೈದಾನದತ್ತ ಧಾವಿಸಿದ ಹೆಲಿಕಾಪ್ಟರ್, ಕೆಳಮಟ್ಟದಲ್ಲೇ ಹಾರಾಡಿತು. ಈ ಬಗ್ಗೆ ಮಾಹಿತಿ ಇಲ್ಲದ ಸಾರ್ವಜನಿಕರು ಆತಂಕಗೊಂಡರು.

ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ನಗರಕ್ಕೆ ಬಂದ ಹೆಲಿಕಾಪ್ಟರ್, ಮೂರು ನಾಲ್ಕು ಬಾರಿ ಪ್ರದಕ್ಷಿಣೆ ಹಾಕಿತು. ಮಾಲಾದೇವಿ ಮೈದಾನ ಮತ್ತು ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ತುರ್ತು ಸಂದರ್ಭಗಳಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗಿದೆ. ಇದಕ್ಕೆ ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದುಕೊಳ್ಳಲಾಗಿತ್ತು ಎಂದು ಕೋಸ್ಟ್ ಗಾರ್ಡ್ ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಕೇಂದ್ರಭಾಗದಲ್ಲಿರುವ ಮಾಲಾದೇವಿ ಮೈದಾನದಲ್ಲಿ ಈ ಹಿಂದೆ ಹಲವು ಸಲ ಪೂರ್ವ ನಿಗದಿಯಂತೆ ಹೆಲಿಕಾಪ್ಟರ್‌ಗಳು ಇಳಿದಿರುವ ಸಂದರ್ಭಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.