ADVERTISEMENT

ಕುಮಟಾ: ಇಂದಿರಾ ಕ್ಯಾಂಟೀನ್ ಆರಂಭ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 3:58 IST
Last Updated 18 ಸೆಪ್ಟೆಂಬರ್ 2025, 3:58 IST
ಕುಮಟಾದಲ್ಲಿ ಮೀನುಗಾರಿಕೆ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು
ಕುಮಟಾದಲ್ಲಿ ಮೀನುಗಾರಿಕೆ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು   

ಕುಮಟಾ: ‘ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆರಂಭವಾದ ಬಡವರಿಗೆ ₹10ಕ್ಕೆ ಊಟ, ₹5ಗೆ ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್ ಸೌಲಭ್ಯ ಮುಂದುವರಿಸಲು ಮತ್ತೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಬೇಕಾಯಿತು’ ಎಂದು ಮೀನುಗಾರಿಕೆ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಪಟ್ಟಣದ ಹೆಗಡೆ ರಸ್ತೆಯ ಕಿತ್ತೂರು ಚನ್ನಮ್ಮ ಉದ್ಯಾನದಲ್ಲಿ ಬುಧವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು.

ಉಪವಾಸ ಇರಬಾರದು ಎಂಬ ಉದ್ದೇಶದಿಂದ ಆರಂಭಿಸಿದ ಅನ್ನಭಾಗ್ಯ ಹಾಗೂ ಪಟ್ಟಣಕ್ಕೆ ಬಂದ ಗ್ರಾಮೀಣ ಜನರು ಮಧ್ಯಾಹ್ನ ಊಟ ಮಾಡದೇ ಉಪವಾಸ ಊರಿಗೆ ಹೋಗಬಾರದು ಎನ್ನುವ ಉದ್ದೇಶದಿಂದ ಆರಂಭಿಸಿದ ಇಂದಿರಾ ಕ್ಯಾಂಟೀನ್ ಯೋಜನೆ ಜನರು ಕಾಂಗ್ರೆಸ್ ಸರ್ಕಾರವನ್ನು ಸದಾ ನೆನಪಿಟ್ಟುಕೊಳ್ಳುವಂತೆ ಮಾಡಿದೆ ಎಂದರು.

ADVERTISEMENT

ಪುರಸಭೆ ಅಧ್ಯಕ್ಷೆ ಸುಮತಿ ಭಟ್ಟ, ಇಂದಿರಾ ಕ್ಯಾಂಟೀನ್ ಎಲ್ಲೋ ನೋಡಿದ್ದೆವು, ಈಗ ಕುಮಟಾದಲ್ಲೂ ಆಗಿರುವುದು ಒಳ್ಳೆಯ ಬೆಳವಣಿಗೆ. ವಿದ್ಯಾರ್ಥಿಗಳು, ಕಾರ್ಮಿಕರು, ಬಡವರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಏಳು ಹಾಗೂ ಎರಡನೇ ಹಂತದಲ್ಲಿ ಆರು ಇಂದಿರಾ ಕ್ಯಾಂಟೀನ್ ಆರಂಭವಾಗುತ್ತಿದೆ. ಇದರ ಜೊತೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್.ಎಂ) ಅಡಿಯಲ್ಲಿ ಸ್ವ ಸಹಾಯ ಸಂಘಗಳ ಮಹಿಳೆಯರಿಗೆ ಆರ್ಥಿಕ ಚಟವಟಿಕೆ ನಡೆಸುವ ಕೇಂದ್ರ, ಅರಿವು ಕೇಂದ್ರ ಹಾಗೂ ಅಂಗನವಾಡಿ ಸಹ ಉದ್ಘಾಟಿಸಲಾಗಿದೆ. ಜಿಲ್ಲಾಡಳಿತದಿಂದ ತನ ಕಸ ವಿಂಗಡಣೆ ಮಾಡುವ (ಎಂ.ಆರ್.ಎಫ್) ಯೋಜನೆ ಜಾರಿ ಬರಲಿದೆ ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಪ್ ಶಶಿ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಮಹೇಶ ನಾಯ್ಕ, ಎ.ಐ.ಸಿ.ಸಿ ಸದಸ್ಯ ನಿವೇದಿತ್ ಆಳ್ವ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸತೀಶ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ ಭಾಗ್ವತ, ಕಾಂಗ್ರೆಸ್ ಪಕ್ಷದ ಅಶೋಕ ಗೌಡ, ಮಧುಸೂದನ್ ಶೇಟ್, ಭಾರತಿ ಪಟಗಾರ, ದಾಕ್ಷಾಯಿಣಿ ಅರಿಗ, ಜಯಶ್ರೀ ನಾಯ್ಕ, ರತ್ನಾಕರ ನಾಯ್ಕ, ಪ್ರದೀಪ ನಾಯಕ, ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ, ತಾಲ್ಲೂಕು ಪಂಚಾಯಿತಿ ಇ.ಒ ಆರ್.ಎಲ್. ಭಟ್ಟ, ತಹಶೀಲ್ದಾರ್ ಕೃಷ್ಣ ಕಾಮಕರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಜೊಸ್ಟಿನ್ ಡಿಸೋಜಾ, ಚಂದ್ರಕಲಾ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.