ಅಂಕೋಲಾ: ‘ಮಕ್ಕಳಲ್ಲಿ ಜ್ಞಾನ ಬೆಳೆಯಬೇಕೆಂದರೆ ವಿಜ್ಞಾನವನ್ನು ಅವರಿಗೆ ಮನದಟ್ಟು ಮಾಡಬೇಕಿದೆ. ಸರಳ ಪ್ರಯೋಗಗಳು ಮಕ್ಕಳಲ್ಲಿ ವಿಜ್ಞಾನದ ಮೇಲೆ ಆಸಕ್ತಿ ಹುಟ್ಟಿಸಬಹುದು’ ಎಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕಿ ರಚನಾ ನಾಯಕ ಹೇಳಿದರು.
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಬೊಗ್ರಿಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿಜ್ಞಾನ ವಿಸ್ಮಯ ‘ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸರಳ ಪ್ರಯೋಗಗಳ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಣಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸುಧೀರ್ ನಾಯಕ ವಿಜ್ಞಾನ ದಿನಾಚರಣೆಯ ಹಿನ್ನೆಲೆ, ಮಹತ್ವ ಹಾಗೂ ಉದ್ದೇಶದ ಬಗ್ಗೆ ಮಾತನಾಡಿದರು.
ಬಿ.ಆರ್.ಪಿ ಮಂಜುನಾಥ ನಾಯ್ಕ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಂದ್ರ ಕಲ್ಗುಟ್ಕರ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಶಿಕ್ಷಕ ವೇಲಾಯುಧನಾಯರ್ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ಭಾಗ್ಯಲಕ್ಷ್ಮೀ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಕಾಂತ ಗೌಡ ಕಾರ್ಯಕ್ರಮ ನಿರೂಪಿಸಿದರು. ದಿಗಂಬರ ನಾಯ್ಕ ವಂದಿಸಿದರು. ಸಿ.ಆರ್.ಪಿ ರಾಜಲಕ್ಷ್ಮೀ ನಾಯಕ, ಆರ್.ಎನ್. ಮಹಾಲೆ, ಜಿ.ಎಸ್.ನಾಯ್ಕ, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.