ADVERTISEMENT

ಇಂದು ಜೈಲ್ ಮಾರುತಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 3:57 IST
Last Updated 25 ಜನವರಿ 2026, 3:57 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕಾರವಾರ: ರಥಸಪ್ತಮಿ ಅಂಗವಾಗಿ ಇಲ್ಲಿನ ಎಂ.ಜಿ.ರಸ್ತೆಯಲ್ಲಿನ ಜೈಲ್ ಮಾರುತಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಭಾನುವಾರ ನಡೆಯಲಿದೆ.

ಬೆಳಿಗ್ಗೆ ಅಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಮಧ್ಯಾಹ್ನ 1 ಗಂಟೆಯಿಂದ 3.30ರವರೆಗೆ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಸತ್ಯಸಾಯಿ ಸೇವಾ ಸಮಿತಿ ಮತ್ತು ಗುರು ಪದ್ಮನಾಭ ಭಜನಾ ಮಂಡಳಿಯಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 9 ಗಂಟೆಗೆ ಮಹಾಮಂಗಳಾರತಿಯೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ADVERTISEMENT