ADVERTISEMENT

ಹೊನ್ನಾವರ | ‘ಡಿಸೆಂಬರ್ ಒಳಗೆ ನೀರು ಪೂರೈಸಿ‘

ತ್ರೈಮಾಸಿಕ ಕೆಡಿಪಿ ಸಭೆ: ಸಚಿವ ಮಂಕಾಳ ವೈದ್ಯ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 7:00 IST
Last Updated 10 ಸೆಪ್ಟೆಂಬರ್ 2025, 7:00 IST
ಹೊನ್ನಾವರದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸಚಿವ ಮಂಕಾಳ ಎಸ್. ವೈದ್ಯ ಮಾತನಾಡಿದರು
ಹೊನ್ನಾವರದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸಚಿವ ಮಂಕಾಳ ಎಸ್. ವೈದ್ಯ ಮಾತನಾಡಿದರು   

ಹೊನ್ನಾವರ: ‘ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಪೈಪ್‌ಲೈನ್ ಅಳವಡಿಸಿರುವ ಪ್ರದೇಶಗಳಿಗೆ ಡಿಸೆಂಬರ್‌ ಒಳಗೆ ಕುಡಿಯುವ ನೀರು ಪೂರೈಕೆ ಮಾಡಬೇಕು’ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಸರ್ಕಾರಿ ಕೆಲಸ ಮಾಡಲು ಮಧ್ಯವರ್ತಿಗಳ ಮೂಲಕ ಜನರಿಂದ ಲಂಚ ಪಡೆಯುತ್ತಿರುವ ಕೆಲವು ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಡ್ಡಾಯ ವರ್ಗಾವಣ ಸೇರಿದಂತೆ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

‘ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳು ಭರ್ತಿಯಾಗಿಲ್ಲ. ತಾಲ್ಲೂಕಿನ 48 ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಇಲ್ಲ. ಕೃಷಿ ಇಲಾಖೆಯಲ್ಲಿ ಬೀಜ ಹಾಗೂ ಗೊಬ್ಬರ ದಾಸ್ತಾನು ಸಾಕಷ್ಟಿದೆ’ ಎಂದು ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.

'ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ನಿವೇಶನ ಗುರುತಿಸಿ. ಬಂದರು ಪ್ರದೇಶದಲ್ಲಿ ಕಟ್ಟಡ ಸಂಕೀರ್ಣ ನಿರ್ಮಿಸಿ, ಹಿಂದಿನಿಂದಲೂ ವ್ಯಾಪಾರ ನಡೆಸಿಕೊಂಡು ಬಂದವರಿಗೆ ಅಲ್ಲಿ ಬಾಡಿಗೆ ನೀಡಬೇಕು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಸಚಿವರು ಸೂಚಿಸಿದರು.

‘₹10 ಕೋಟಿ ವೆಚ್ಚದಲ್ಲಿ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ’ ಎಂದು ಅವರು ತಿಳಿಸಿದರು.

ತಹಶೀಲ್ದಾರ್ ಪ್ರವೀಣ ಕರಾಂಡೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚೇತನಕುಮಾರ, ಆಡಳಿತಾಧಿಕಾರಿ ಎನ್.ಆರ್. ಹೆಗಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.