ADVERTISEMENT

ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆ: ಕಾಗೇರಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 8:22 IST
Last Updated 5 ನವೆಂಬರ್ 2025, 8:22 IST
ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ   

ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

'ವಂದೇ ಮಾತರಂ ಗೀತೆ ರಾಷ್ಟ್ರಗೀತೆಗೆ ಸರಿಸಮನಾಗಿದೆ. ಈ ಗೀತೆಗೆ ದೇಶದಲ್ಲಿ ಪ್ರಾಮುಖ್ಯತೆ ನೀಡಬೇಕು. ಸ್ವಾತಂತ್ರ್ಯ ಹೋರಾಟಕ್ಕೆ ಇದೇ ಗೀತೆ ಪ್ರೇರಣೆ ನೀಡಿತ್ತು' ಎಂದರು.

ADVERTISEMENT

'ವಂದೇ ಮಾತರಂ ಗೀತೆ ರಾಷ್ಟ್ರಗೀತೆ ಆಗಬೇಕು ಎಂಬ ಕೂಗು ಬಲವಾಗಿತ್ತು. ಪೂರ್ವಜರು ವಂದೇ ಮಾತರಂ ಜೊತೆಗೆ ಜನಗಣಮನವನ್ನು ರಾಷ್ಟ್ರಗೀತೆ ಎಂದು ಒಪ್ಪಿಕೊಂಡರು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.