ಶಿರಸಿ: ‘ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಮುಚ್ಚುವುದು ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.
‘ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳು ಇರುವುದರಿಂದ ಬಡ ರೋಗಿಗಳಿಗೆ ಅನುಕೂಲಕರವಾಗಿದೆ. ಅಸಂಖ್ಯಾತ ಜನರಿಗೆ ತುಂಬಾ ಪ್ರಯೋಜನವಾಗಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರವು ಸೂಕ್ತ ಕಾರಣ ನೀಡದೆ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಈ ಜನೌಷಧ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿರುವುದು ದುರದೃಷ್ಟಕರ ಮತ್ತು ಬಡವರ ವಿರೋಧಿ ನಡೆಯಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.