ADVERTISEMENT

ಕಾರವಾರ | ಜೆಜೆಎಂ; ತಪ್ಪು ಸರಿಪಡಿಸಿಕೊಳ್ಳದಿದ್ದರೆ ಶಿಸ್ತುಕ್ರಮ: ಕಾಗೇರಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2025, 14:27 IST
Last Updated 4 ಮಾರ್ಚ್ 2025, 14:27 IST
<div class="paragraphs"><p>ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ಸಭೆ ನಡೆಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ,  ಪಾಲ್ಗೊಂಡಿದ್ದರು&nbsp;</p></div>

ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ಸಭೆ ನಡೆಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಪಾಲ್ಗೊಂಡಿದ್ದರು 

   

ಕಾರವಾರ: ‘ಜಲಜೀವನ ಮಿಷನ್ ಯೋಜನೆಯಲ್ಲಿ ಕಡತಗಳಲ್ಲಿ ಕಾಮಗಾರಿ ನಡೆದಿದೆ ಎಂದು ಬಿಂಬಿಸಲಾಗುತ್ತಿದ್ದು, ವಾಸ್ತವದಲ್ಲಿ ನೀರು ಪೂರೈಕೆ ಆಗುತ್ತಿಲ್ಲ. ಇಂತಹ ತಪ್ಪುಗಳನ್ನು ಸರಿಪಡಿಸಿಕೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್‌ರನ್ನು ತರಾಟೆಗೆ ತೆಗೆದುಕೊಂಡರು. ಸಭೆಗೆ ಬಾರದ ಕಾರ್ಯನಿರ್ವಾಹಕ ಎಂಜಿನಿಯರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಜೆಜೆಎಂ ಕಾಮಗಾರಿಗಾಗಿ ಜಿಲ್ಲೆಗೆ ₹966 ಕೋಟಿ, ಬಹುಗ್ರಾಮ ಕುಡಿಯುವ ನೀರು ಯೋಜನೆಗ ₹800 ಕೋಟಿ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿದೆ. ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕೈಗೊಂಡು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಹಲಸು ಬೆಳೆ ಹೇರಳವಾಗಿದ್ದು, ಸೂಕ್ತ ರೀತಿಯಲ್ಲಿ ಬಳಕೆ ಮಾಡದ ಕಾರಣದಿಂದ ವ್ಯರ್ಥವಾಗುತ್ತಿದೆ. ಹಲಸಿನ ಕಾಯಿಯ ಮೌಲ್ಯವರ್ಧನೆಗೆ ಹೊಸ ಸಂಶೋಧನೆಗಳು ನಡೆಯಬೇಕು. ಕೇಂದ್ರದ ಕೃಷಿ ಯಾಂತ್ರೀಕರಣ ಉಪ ಆಭಿಯಾನ ಯೋಜನೆಯಡಿ ಜಿಲ್ಲೆಯ ಕೃಷಿಕರಿಗೆ ಕೃಷಿ ಯಂತ್ರೋಪಕರಣಗಳನ್ನು ಒದಗಿಸುವ ಮೂಲಕ ಜಿಲ್ಲೆಯಲ್ಲಿ ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

‘ಆಯುಷ್ಮಾನ್ ಭಾರತ ಕಾರ್ಡ್ ವಿತರಣೆಯಲ್ಲಿ ಕಂಡುಬರುತ್ತಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಿ ನಿಗಧಿತ ಪ್ರಗತಿ ಸಾಧಿಸಿ, ಪಿಎಂ ವಯೋವೃಂದನ ಯೋಜನೆಯಲ್ಲಿ ಸಂಪೂರ್ಣ ಗುರಿ ಸಾಧಿಸಬೇಕು. ಮಂಗನ ಕಾಯಿಲೆ ಹರಡದಂತೆ ನಿಯಂತ್ರಣ ಎಚ್ಚರಿಕೆ ವಹಿಸಬೇಕು. ಜನೌಷಧಿ ಕೇಂದ್ರದ ಪ್ರಯೋಜನ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು’ ಎಂದರು.

ಕೇಂದ್ರದ ಬಜೆಟ್‌ನಲ್ಲಿ ಮೀನುಗಾರರ ಅಭಿವೃದ್ಧಿಗೆ ಹೆಚ್ಚು ಅನುದಾನ ಒದಗಿಸಿದ್ದು, ಜಿಲ್ಲೆಯ ಮೀನುಗಾರರಿಗೆ ಇದರ ಹೆಚ್ಚಿನ ಲಾಭ ಒದಗಿಸುವಂತೆ ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರು ಇದ್ದರು.

ಹೆದ್ದಾರಿ ಅಂಚಿನಲ್ಲಿ ಸುರಕ್ಷತೆಗೆ ಆದ್ಯತೆ ನೀಡಿ
‘ಅರೆಬೈಲ್ ಘಟ್ಟ ಪ್ರದೇಶದಲ್ಲಿ ಅಗತ್ಯವಿರುವ ದುರಸ್ತಿ ಕಾರ್ಯಗಳನ್ನು ಕೈಗೊಂಡು ಅಪಘಾತಗಳು ನಡೆಯುವುದನ್ನು ತಪ್ಪಿಸಬೇಕು. ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಮಳೆಗಾಲದಲ್ಲಿ ಭೂಕುಸಿತ ಉಂಟಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಶಿರಸಿ–ಕುಮಟಾ ರಸ್ತೆ ಕಾಮಗಾರಿಯನ್ನು ಆದ್ಯತೆಯಲ್ಲಿ ಮುಗಿಸಿ ಮಳೆಗಾಲದಲ್ಲಿ ನೆರೆ ಉಂಟಾಗುವ ಪ್ರದೇಶಗಳನ್ನು ಮೊದಲೇ ಗುರುತಿಸಿ ಈಗಿನಿಂದಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ನೋಡಿಕೊಳ್ಳಿ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.