
ಜೊಯಿಡಾ: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಿಸಿ ವಿಬಿ ಜಿ ರಾಮ್ ಜಿ ಎಂದು ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಜೊಯಿಡಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುನಾಥ ಮೊನ್ನೊಳ್ಳಿ ಅವರಿಗೆ ಮನವಿ ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಗಾವಡೆ, ’ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಭಾಗದ ಹಲವು ಬಡ ಜನರಿಗೆ ಅನುಕೂಲವಾಗಿದೆ. ಕೇಂದ್ರ ಸರ್ಕಾರ ಯೋಜನೆಯ ಹೆಸರನ್ನು ಬದಲಾಯಿಸಬಾರದು ಹಾಗೂ ಯೋಜನೆಯಲ್ಲಿ ತಿದ್ದುಪಡಿ ತರಬಾರದು’ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ತಹಶೀಲ್ದಾರ್ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕೆಪಿಸಿಸಿ ಸದಸ್ಯ ಸದಾನಂದ ದಬ್ಗಾರ, ಜಿಪಂ ಮಾಜಿ ಸದಸ್ಯ ಸಂಜಯ ಹಣಬರ, ಪಕ್ಷದ ಕಾರ್ಯಕರ್ತರಾದ ವಿನಯ ದೇಸಾಯಿ, ಸುಕನ್ಯ ದೇಸಾಯಿ, ಅರುಣ ಭಗವತಿರಾಜ್, ದತ್ತಾ ನಾಯ್ಕ, ಪ್ರಸನ್ನ ಗಾವಡಾ, ಶ್ರೀಧರ ದಬ್ಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.