ADVERTISEMENT

ಕೇಂದ್ರ ಸರ್ಕಾರದ ವಿವಿಧ ಕಾಯ್ದೆಗಳ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:23 IST
Last Updated 13 ಫೆಬ್ರುವರಿ 2026, 7:23 IST
ಕೇಂದ್ರ ಸರ್ಕಾರದ ವಿವಿಧ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳ ವತಿಯಿಂದ ಜೊಯಿಡಾದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಯಿತು
ಕೇಂದ್ರ ಸರ್ಕಾರದ ವಿವಿಧ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳ ವತಿಯಿಂದ ಜೊಯಿಡಾದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಯಿತು   

ಜೊಯಿಡಾ: ಕೇಂದ್ರ ಸರ್ಕಾರದ ವಿವಿಧ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಯಿತು.

ಇಲ್ಲಿನ ಶಿವಾಜಿ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರೇಮಾನಂದ ವೇಳೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ತಿದ್ದುಪಡಿ ಮಾಡಬಾರದು, ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು,ಬಡವರ ಅತಿಕ್ರಮಣ ಭೂಮಿ ಸಕ್ರಮಾತಿ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ತಾಲ್ಲೂಕು ಅಧ್ಯಕ್ಷೆ ಮಂಗಳಾ ಕಾಂಬಳೆ ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಬೆಲೆ ಏರಿಕೆ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಆಗಬೇಕು, ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ,ಯು ಕೆಜಿ ಶಿಕ್ಷಣವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಬಿಸಿಯೂಟ ಅಡುಗೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.