ADVERTISEMENT

ಕಾರವಾರ: ಪತ್ರಕರ್ತ ನಾಗರಾಜ್ ಹರಪನಹಳ್ಳಿಗೆ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 3:17 IST
Last Updated 12 ಆಗಸ್ಟ್ 2025, 3:17 IST
ನಾಗರಾಜ್ ಹರಪನಹಳ್ಳಿ
ನಾಗರಾಜ್ ಹರಪನಹಳ್ಳಿ   

ಕಾರವಾರ: ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಕೊಡಮಾಡುವ ‘ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ನಾಗರಾಜ್ ಹರಪನಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ಸ್ಮರಣಿಕೆ, ₹5 ಸಾವಿರ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ. ನಾಗರಾಜ್ ಅವರು 27 ವರ್ಷಗಳಿಂದ ಪತ್ರಕರ್ತರಾಗಿ ಕಾರವಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಒಂದು ಅವಧಿಗೆ ಕಾರ್ಯನಿರ್ವಹಿಸಿದ್ದರು.

ಲೇಖಕರಾಗಿರುವ ಅವರು ‘ಬಿಸಿಲ ಬಯಲ ಕಡಲು’ ಕವನ ಸಂಕಲನ, ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, ‘ವಿರಹಿ ದಂಡೆ’ ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.