ADVERTISEMENT

ಕೆ. ಕಸ್ತೂರಿ ರಂಗನ್ ಉತ್ತಮ ಜ್ಞಾನಿ: ಆರ್.ವಿ.ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2025, 13:48 IST
Last Updated 26 ಏಪ್ರಿಲ್ 2025, 13:48 IST
ಹಳಿಯಾಳದ ಕೆನರಾ ಬ್ಯಾಂಕ್‌ ದೇಶಪಾಂಡೆ ಆರ್‌ ಸೆಟಿ ಸಂಸ್ಥೆಯಲ್ಲಿ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೃಷ್ಣಸ್ವಾಮಿ ಕಸ್ತೂರಿ ರಂಗನ್‌ ಭಾಗವಹಿಸಿದ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಡಾ.ಕೃಷ್ಣಸ್ವಾಮಿ ಕಸ್ತೂರಿ ರಂಗನ್‌ ರವರನ್ನು ಸನ್ಮಾನಿಸಿದರು (ಸಂಗ್ರಹ ಚಿತ್ರ)
ಹಳಿಯಾಳದ ಕೆನರಾ ಬ್ಯಾಂಕ್‌ ದೇಶಪಾಂಡೆ ಆರ್‌ ಸೆಟಿ ಸಂಸ್ಥೆಯಲ್ಲಿ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೃಷ್ಣಸ್ವಾಮಿ ಕಸ್ತೂರಿ ರಂಗನ್‌ ಭಾಗವಹಿಸಿದ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಡಾ.ಕೃಷ್ಣಸ್ವಾಮಿ ಕಸ್ತೂರಿ ರಂಗನ್‌ ರವರನ್ನು ಸನ್ಮಾನಿಸಿದರು (ಸಂಗ್ರಹ ಚಿತ್ರ)   

ಹಳಿಯಾಳ: ‘ಹಿರಿಯ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ನಿಧನ ದೇಶಕ್ಕೆ ತುಂಬಲಾರದ ನಷ್ಟ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸಂತಾಪ ಸೂಚಿಸಿದ್ದಾರೆ.

‘ಏಳು ವರ್ಷಗಳ ಹಿಂದೆ (2018ರಲ್ಲಿ) ಕೆ.ಕಸ್ತೂರಿ ರಂಗನ್ ಅವರು ಹಳಿಯಾಳಕ್ಕೆ ಭೇಟಿ ನೀಡಿ ವಿ.ಆರ್.ಡಿ.ಎಂ ಟ್ರಸ್ಟ್ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಲ್ಲಿನ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು, ಸಿಬ್ಬಂದಿ ಜೊತೆಗೆ ಸಂವಾದ ನಡೆಸಿದ್ದರು. ಅವರಲ್ಲಿನ ಅಪಾರ ಜ್ಞಾನವಿತ್ತು’ ಎಂದು ದೇಶಪಾಂಡೆ ಹೇಳಿದ್ದಾರೆ.

‘21ನೇ ಶತಮಾನದ ಶಿಕ್ಷಣದ ಆಶೋತ್ತರಗಳನ್ನು ಕೈಗೂಡಿಸುವಂತೆ ಮಾಡುವ ಹೊಸ ವ್ಯವಸ್ಥೆಯಾದ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವಲ್ಲಿ ಹಾಗೂ ಅನುಷ್ಠಾನಗೊಳಿಸುವುದರಲ್ಲಿ ಅವರ ನೇತೃತ್ವದ ಸಮಿತಿ ನೀಡಿದ ಕೊಡುಗೆ ಗಣನೀಯವಾಗಿದೆ’ ಎಂದೂ ಸ್ಮರಿಸಿದ್ದಾರೆ.

ADVERTISEMENT
ಹಳಿಯಾಳದ ಕೆನರಾ ಬ್ಯಾಂಕ್‌ ದೇಶಪಾಂಡೆ ಆರ್‌ ಸೆಟಿ ಸಂಸ್ಥೆಯಲ್ಲಿ ಬಾಹ್ಯಾಕಾಶ ವಿಜ್ಞಾನಿ ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೃಷ್ಣಸ್ವಾಮಿ ಕಸ್ತೂರಿ ರಂಗನ್‌ ಸ್ವ ಉದ್ಯೋಗ ತರಭೇತಿ ದಾರರೊಂದಿಗೆ ಸಂವಾದ ನಡೆಸಿದರು.ಶಾಸಕ ಆರ್.ವಿ.ದೇಶಪಾಂಡೆ ಮತ್ತಿತರರು ಪಾಲ್ಗೋಂಡಿದ್ದರು.(ಸಂಗ್ರಹ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.