ADVERTISEMENT

ಸಂಚಾರ ಹೊರಟ ಕದಂಬ ಜ್ಯೋತಿ

ಎರಡು ಅಲಂಕೃತ ವಾಹನಗಳಲ್ಲಿ ಜ್ಯೋತಿ ಸಂಚಾರ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 12:05 IST
Last Updated 6 ಫೆಬ್ರುವರಿ 2020, 12:05 IST
ಶಿರಸಿ ತಾಲ್ಲೂಕಿನ ಗುಡ್ನಾಪುರದಲ್ಲಿ ಜಿಲ್ಲಾಧಿಕಾರಿ ಹರೀಶಕುಮಾರ್ ಹಾಗೂ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಕದಂಬ ಜ್ಯೋತಿ ಬೆಳಗಿದರು
ಶಿರಸಿ ತಾಲ್ಲೂಕಿನ ಗುಡ್ನಾಪುರದಲ್ಲಿ ಜಿಲ್ಲಾಧಿಕಾರಿ ಹರೀಶಕುಮಾರ್ ಹಾಗೂ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಕದಂಬ ಜ್ಯೋತಿ ಬೆಳಗಿದರು   

ಶಿರಸಿ: ರಾಜ್ಯ ಪ್ರಸಿದ್ಧ ಕದಂಬೋತ್ಸವದ ಬಗ್ಗೆ ನೆರೆಯ ಜಿಲ್ಲೆಗಳಿಗೆ ಸುದ್ದಿ ಪಸರಿಸುವ, ಉತ್ಸವದ ಅಧಿಕೃತ ಆಹ್ವಾನ ನೀಡುವ ಕದಂಬ ಜ್ಯೋತಿ ಸಂಚಾರಕ್ಕೆ ತಾಲ್ಲೂಕಿನ ಗುಡ್ನಾಪುರದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಗುಡ್ನಾಪುರದ ಬಂಗಾರೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಜ್ಯೋತಿಯನ್ನು ರಾಣಿ ನಿವಾಸದವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಲಾ ತಂಡಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದವು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಕದಂಬ ಜ್ಯೋತಿ ಉದ್ಘಾಟಿಸಿದರು. ಜನರ ಉತ್ಸವವಾಗಿರುವ ಕದಂಬೋತ್ಸವವು ಅಧಿಕಾರಿಗಳ ಸಹಭಾಗಿತ್ವದಲ್ಲಿ ನಡೆಯುತ್ತದೆ. ಕನ್ನಡದ ಮೊದಲ ರಾಜಮನೆತನ ಕದಂಬರ ಇತಿಹಾಸ ತಿಳಿಸಲು ಈ ಉತ್ಸವ ಪೂರಕವಾಗಿದೆ ಎಂದರು.

ADVERTISEMENT

ಗುಡ್ನಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಭೋಜಪ್ಪ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಉಷಾ ಹೆಗಡೆ, ಬಸವರಾಜ ದೊಡ್ಮನಿ, ರೂಪಾ ನಾಯ್ಕ, ಬನವಾಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಣೇಶ ಸಣ್ಣಲಿಂಗಣ್ಣನವರ್, ಗುಡ್ನಾಪುರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಫಿಲಿಪ್ ಪಿಂಟೋ, ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮಂದಲಮನಿ, ಪೌರಾಯುಕ್ತ ರಮೇಶ ನಾಯಕ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್, ಡಿಡಿಪಿಐ ದಿವಾಕರ ಶೆಟ್ಟಿ, ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕ ವಿ.ಆರ್.ನಾಗರಾಜ ಉದ್ದರು. ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಸ್ವಾಗತಿಸಿದರು. ಉದಯಕುಮಾರ ಕಾನಳ್ಳಿ ನಿರೂಪಿಸಿದರು. ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕದಂಬ ಜ್ಯೋತಿಯು ಎರಡು ವಾಹನಗಳಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳು, ನೆರೆಯ ಹಾವೇರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಚರಿಸಿ, ಶನಿವಾರ (ಫೆ.8) ಬನವಾಸಿ ತಲುಪಲಿದೆ. ಇದೇ ಜ್ಯೋತಿಯಿಂದ ಕದಂಬೋತ್ಸವ ಉದ್ಘಾಟಿಸಲಾಗುತ್ತದೆ.

ಪ್ರಮುಖರ ಗೈರು:

ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸುವ ಕಾರಣಕ್ಕೆ ಕಾರ್ಯಕ್ರಮದಲ್ಲಿ ಗೈರಾಗಿದ್ದರು. ಆದರೆ, ಆಮಂತ್ರಣ ಪತ್ರಿಕೆಯಲ್ಲಿ ಹೆಸರಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅನಂತಕುಮಾರ ಹೆಗಡೆ ಕೂಡ ಅನುಪಸ್ಥಿತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.