ಪ್ರಾತಿನಿಧಿಕ ಚಿತ್ರ
ಜೊಯಿಡಾ: ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಕಾಳಿ ನದಿಯಲ್ಲಿ ರ‍್ಯಾಫ್ಟಿಂಗ್ ನಡೆಸಿದ ಜಟ್ಟಿ ಮಾಲೀಕ ಮತ್ತು ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಪ್ರಭಾರ ಕಂದಾಯ ನಿರೀಕ್ಷಕ ಮಂಜುನಾಥ ಲಮಾಣಿ ಅವರು ರಾಮನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ಸಲ್ಲಿಸಿದ್ದಾರೆ.
ಜೂನ್ 1ರಿಂದ ಸೆ.30ರ ವರೆಗೆ ಕಾಳಿ ನದಿಯಲ್ಲಿ ಎಲ್ಲ ರೀತಿಯ ಜಲಸಾಹಸ ಕ್ರೀಡೆಗಳನ್ನು ನಿಷೇಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದರು. ಆದರೆ ಜುಲೈ 15ರಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಅವರ ತಂಡದವರು ಕಾಳಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.