ADVERTISEMENT

ಕನ್ನಡ ರಾಜ್ಯೋತ್ಸವ : ಸರಳ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 2:40 IST
Last Updated 24 ಅಕ್ಟೋಬರ್ 2020, 2:40 IST
ಅಂಕೋಲಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆ
ಅಂಕೋಲಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆ   

ಅಂಕೋಲಾ: ವಿಧಾನಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ ನೀತಿ ಸಂಹಿತೆ ಮತ್ತು ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಯಿತು.

ಕನ್ನಡ ರಾಜ್ಯೋತ್ಸವ ಆಚರಣೆಯ ಸಿದ್ಧತೆಯ ಕುರಿತು ಪೂರ್ವಭಾವಿ ಸಭೆ ಶುಕ್ರವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ಉದಯ ಕುಂಬಾರ, ವಿವಿಧ ಇಲಾಖೆಯವರು ತಮ್ಮ ಕಾರ್ಯಾಲಯದಲ್ಲಿ ಬೆಳಿಗ್ಗೆ 8 ಗಂಟೆಗೆ ಭುವನೇಶ್ವರಿ ದೇವಿಯ ಪೂಜೆ ಮಾಡಬೇಕು. 9 ಗಂಟೆಗೆ ಸತ್ಯಾಗ್ರಹ ಸ್ಮಾರಕ ಸಭಾಭವನದಲ್ಲಿ ತಾಲ್ಲೂಕು ಆಡಳಿತದಿಂದ ಸರಳವಾಗಿ ರಾಜ್ಯೋತ್ಸವ ಆಚರಣೆ ಮಾಡಲಾಗುವುದು. ಹಿಂದಿನ ವರ್ಷದಂತೆ ಸಾಯಂಕಾಲ ಅಂಗಡಿ-ಮುಂಗಟ್ಟುಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ದೀಪಾಲಂಕಾರ ಮಾಡಲು ಅವಕಾಶ ನೀಡಲಾಗಿದೆ ಎಂದರು.

ADVERTISEMENT

ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪಿ.ವೈ.ಸಾವಂತ, ಪುರಸಭೆ ಮುಖ್ಯಾಧಿಕಾರಿ ಬಿ, ಪ್ರಹ್ಲಾದ, ಸಿಪಿಐ ಕೃಷ್ಣಾನಂದ ನಾಯಕ, ಸಾಹಿತಿಗಳಾದ ವಿಷ್ಣು ನಾಯ್ಕ, ಪ್ರೊ. ಆರ್. ಜಿ. ಗುಂದಿ ಸೇರಿದಂತೆ ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.