ಅಂಕೋಲಾ: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಮೇ 5 ರಂದು ಬೆಳಿಗ್ಗೆ 10 ಗಂಟೆಗೆ ಅಂಕೋಲಾದ ಪಿ.ಎಂ.ಹೈಸ್ಕೂಲ್‌ನ ರೈತ ಭವನದಲ್ಲಿ ನಡೆಯಲಿದೆ.
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಂಕೋಲಾ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಕಾರವಾರದ ಬರಹಗಾರ್ತಿ ಪ್ರೇಮಾ ಟಿ.ಎಂ.ಆರ್. ಉದ್ಘಾಟಿಸುವರು. ಉತ್ತರ ಕನ್ನಡ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ ಅಧ್ಯಕ್ಷತೆ ವಹಿಸುವರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಚಂದ್ರ ನಾಯಕ ‘ಜನಸಾಮಾನ್ಯರ ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ.
ಕೆನರಾ ವೆಲ್ಫರ್ ಟ್ರಸ್ಟ್ ಆಡಳಿತಾಧಿಕಾರಿ ರವೀಂದ್ರ ಕೇಣಿ, ಅಂಕೋಲಾ ತಾಲ್ಲೂಕು ಕಸಾಪ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ಗೌರವ ಪಾಲ್ಗೊಳ್ಳುವರು. ಇದೇ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಹಮ್ಮಿಕೊಳ್ಳಲಾದ ರಸಪ್ರಶ್ನೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.