ADVERTISEMENT

‘ಅರಣ್ಯ ಭೂಮಿ ಹಕ್ಕು ಸಿಗುವವರೆಗೂ ಉಗ್ರ ಹೋರಾಟ’

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 5:27 IST
Last Updated 20 ಜನವರಿ 2026, 5:27 IST
ಅಂಕೋಲಾ ಪಟ್ಟಣದಲ್ಲಿ ರವಿವಾರ ನಡೆದ ಪ್ರಾಂತ ರೈತ ಸಂಘದ ಜಿಲ್ಲಾಮಟ್ಟದ 6ನೇ ರೈತ ಸಮ್ಮೇಳನದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಮಾತನಾಡಿದರು.
ಅಂಕೋಲಾ ಪಟ್ಟಣದಲ್ಲಿ ರವಿವಾರ ನಡೆದ ಪ್ರಾಂತ ರೈತ ಸಂಘದ ಜಿಲ್ಲಾಮಟ್ಟದ 6ನೇ ರೈತ ಸಮ್ಮೇಳನದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಮಾತನಾಡಿದರು.   

ಅಂಕೋಲಾ: ಕರ್ನಾಟಕ ರಾಜ್ಯದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಅರಣ್ಯ ಭೂಮಿ ಸಾಗುವಳಿದಾರರು ಮತ್ತು ವಸತಿ ಹೊಂದಿದವರಿದ್ದು, ನ್ಯಾಯಯುತವಾಗಿ ಅವರಿಗೆ ಸಿಗಬೇಕಾದ ಭೂಮಿಹಕ್ಕನ್ನು ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊಸ ಷರತ್ತು ಹೇರಿ ವಂಚನೆ ಮಾಡುತ್ತಿವೆ. ಅವರಿಗೆಲ್ಲ ಭೂಮಿಹಕ್ಕು ಸಿಗುವವರೆಗೂ ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯದಾದ್ಯಂತ ಉಗ್ರವಾದ ಹೋರಾಟ ನಡೆಸುತ್ತದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ನಾಡವರ ಸಭಾ ಭವನದಲ್ಲಿ ಭಾನುವಾರ ನಡೆದ ಪ್ರಾಂತ ರೈತ ಸಂಘದ ಜಿಲ್ಲಾಮಟ್ಟದ 6ನೇ ರೈತ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತರ ಕನ್ನಡ ಜಿಲ್ಲೆಯ ಪರಿಸರಕ್ಕೆ ಮಾರಕವಾದ ನದಿ ಜೋಡಣೆ ಯೋಜನೆಯನ್ನು ಸರ್ಕಾರ ಕೈಬಿಡಬೇಕು. ದೇಶದ ಪ್ರಧಾನಿಯವರು ರೈತರೇ ಇಲ್ಲದ ಭಾರತ ಮಾಡಲು ಹೋರಟಿದ್ದಾರೆ. ಕಾರ್ಪೊರೇಟ್ ಕಂಪನಿಗಳಿ ಕೃಷಿ ಕ್ಷೇತ್ರ ಒಪ್ಪಿಸುತ್ತಿದ್ದಾರೆ ಎಂದರು.

ADVERTISEMENT

ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾರಾಮ ನಾಯಕ ಮಾತನಾಡಿ, ಜಿಲ್ಲೆಯಲ್ಲಿ ರೈತ ಚಳವಳಿ 1936 ರಿಂದ ಇದ್ದು, ಸ್ವಾತಂತ್ರ್ಯ ಹೋರಾಟದ ಜೊತೆಯಲ್ಲಿ ಭೂಮಿ ಹೋರಾಟವು ಇತ್ತು. 1980ರ ನಂತರ ಅರಣ್ಯ ಭೂಮಿ ಹೋರಾಟ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಅರಣ್ಯ ಹಕ್ಕು ನೀಡುವ ಕಾನೂನು ಬಂದು ಇಪ್ಪತ್ತು ವರ್ಷ ಕಳೆದರು ಹಕ್ಕು ಪತ್ರ ನೀಡದೇ ಸತಾಯಿಸುತ್ತಿದ್ದಾರೆ. ಈಗ ಮತ್ತೆ ತುರ್ತಾಗಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದ್ದು, ಇದು ಸರಿಯಾದ ಕ್ರಮವಲ್ಲ ಎಂದರು.

ಸಿಐಟಿಯು ಜಿಲ್ಲಾ ಅಧ್ಯಕ್ಷ ತಿಲಕ್ ಗೌಡ, ಮೋಹಿನಿ ನಮಸೇಕರ, ವೀರೇಶ ರಾಠೋಡ, ಜಿಲ್ಲಾ ಕಾರ್ಯದರ್ಶಿ ಶ್ಯಾಮನಾಥ ನಾಯ್ಕ, ಗೌರೀಶ ನಾಯಕ, ತಿಮ್ಮಪ್ಪ ಗೌಡ, ಪ್ರೇಮಾನಂದ ವೇಳಿಪ್, ಸಂತೋಷ ನಾಯ್ಕ, ಪ್ರೇಮಾ ಉಳಗೇಕರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.