ADVERTISEMENT

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಮಳೆ ಶುರು

​ಪ್ರಜಾವಾಣಿ ವಾರ್ತೆ
Published 13 ಮೇ 2021, 13:59 IST
Last Updated 13 ಮೇ 2021, 13:59 IST
   

ಕಾರವಾರ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ನಗರವೂ ಸೇರಿದಂತೆ ಜಿಲ್ಲೆಯ ಕರಾವಳಿಯ ವಿವಿಧೆಡೆ ಗುರುವಾರಮಳೆಯಾಗುತ್ತಿದೆ. ಗುಡುಗು, ಸಿಡಿಲಿನ ಅಬ್ಬರವಿಲ್ಲದೇ ಸಾಧಾರಣ ಪ್ರಮಾಣದಲ್ಲಿ ಹನಿಗಳು ಬೀಳುತ್ತಿವೆ.

ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 14ರ ನಂತರ ಚಂಡಮಾರುತವಾಗಿ ಪರಿವರ್ತನೆಯಾಗಬಹುದು. ಅದರ ಪರಿಣಾಮ ಮೇ 15ರಂದು ರಾಜ್ಯದ ಕರಾವಳಿಯಲ್ಲಿ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ಮರಳುವಂತೆ ಕೋಸ್ಟ್‌ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಈಗಾಗಲೇ ಸೂಚನೆ ನೀಡಲಾಗಿದೆ.

ADVERTISEMENT

ಗುಜರಾತ್ ಭಾಗದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಲಿದ್ದು, ಮ್ಯಾನ್ಮಾರ್ ದೇಶವು ಅದಕ್ಕೆ 'ತೌಕ್ತೆ' (ಹಲ್ಲಿ) ಎಂದು ಹೆಸರಿಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.