
ಶಿರಸಿ: ‘ಏಪ್ರಿಲ್ ಕೊನೆಯ ವಾರದೊಳಗೆ ಗುರುತಿಸಲಾದ ಎಲ್ಲ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
‘ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸರ್ಕಾರ ಬದ್ಧವಾಗಿದ್ದು, ₹3,500 ಕೋಟಿ ವೆಚ್ಚದಲ್ಲಿ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕಾರ್ಯ ಕಡ್ಡಾಯವಾಗಿ ಆಗಬೇಕು. ಇದು ಕೇವಲ ಶಿಕ್ಷಣದ ಪ್ರಗತಿಯಷ್ಟೇ ಅಲ್ಲದೆ, ಶಿಕ್ಷಕರ ಬಡ್ತಿಗೂ ಪೂರಕವಾಗಲಿದೆ. ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು ಒದಗಿಸಲಾಗಿದೆ. ಕಾನೂನು ತೊಡಕಿನಿಂದಾಗಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದ್ದು, ಶೀಘ್ರ ಅದನ್ನು ಬಗೆಹರಿಸಲಾಗುವುದು’ ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.