ADVERTISEMENT

ಭಟ್ಕಳದಲ್ಲಿ ಭಾರಿ ಮಳೆ: ಗದ್ದೆಯಲ್ಲಿ ಹರಿದ ನದಿ ನೀರು, ಭತ್ತದ ಸಸಿಗಳು ನಾಶ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 7:04 IST
Last Updated 8 ಜುಲೈ 2022, 7:04 IST
   

ಕಾರವಾರ: ಭಟ್ಕಳ ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಣ್ಕುಳಿಯ ನಾಗಮಾಸ್ತಿ ನದಿಯ ಸಣ್ಣ ಕಟ್ಟು ಒಡೆದು ಸಮೀಪದ ಕೃಷಿ ಜಮೀನಿಗೆ ನೀರು ನುಗ್ಗಿದೆ. ಗದ್ದೆಗಳಲ್ಲಿ ನಾಟಿ ಮಾಡಲಾಗಿದ್ದ ಭತ್ತದ ಸಸಿಗಳು ಕೊಚ್ಚಿಕೊಂಡು ಹೋಗಿದ್ದು, ರೈತರು ಚಿಂತಿತರಾಗಿದ್ದಾರೆ.

ಕೃಷಿ ಮಾಡಲು ನೀರಿಗಾಗಿ ರೈತರು ನದಿಗೆ ಸಣ್ಣ ಕಟ್ಟುಗಳನ್ನು ನಿರ್ಮಿಸಿಕೊಂಡಿದ್ದರು. ಗುರುವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಅವು ಒಡೆದಿವೆ.

ತಾಲ್ಲೂಕಿ ಚೌಥನಿ ನದಿಯಲ್ಲೂ ನೀರಿನ ಪ್ರಮಾಣ ಮತ್ತಷ್ಟು ಏರಿಕೆ ಕಂಡಿದ್ದು, ಸೇತುವೆ ಮುಳುಗಡೆಯಾಗಿದೆ. ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಪಟ್ಟಣದಿಂದ ಪುರವರ್ಗಕ್ಕೆ ಹೋಗುವ ರಸ್ತೆಯಲ್ಲಿ ಸಂಪರ್ಕ ಕಡಿತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.