
ಪ್ರಜಾವಾಣಿ ವಾರ್ತೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗ ಮತ್ತು ಘಟ್ಟದ ಮೇಲಿನ ಕೆಲವೆಡೆ ಬುಧವಾರ ಬಿರುಸಿನ ಮಳೆ ಸುರಿಯಿತು. ಕಾರವಾರ ಮತ್ತು ಭಟ್ಕಳದಲ್ಲಿ ಕೆಲ ಗಂಟೆಗಳವರೆಗೆ ಗಾಳಿ ಸಹಿತ ಮಳೆಯಾಗಿದೆ.
ಅ. 31ರ ವರೆಗೂ ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 35 ರಿಂದ 45 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆ ಬೀಳುವ ಸಾಧ್ಯತೆ ಇದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.