ADVERTISEMENT

ಬೆಳೆವಿಮೆ ಅನ್ಯಾಯ ಸರಿಪಡಿಸಲು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 1:25 IST
Last Updated 27 ಆಗಸ್ಟ್ 2021, 1:25 IST
ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರಿಗೆ ರೈತರು ಮನವಿ ಸಲ್ಲಿಸಿದರು
ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರಿಗೆ ರೈತರು ಮನವಿ ಸಲ್ಲಿಸಿದರು   

ಮುಂಡಗೋಡ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಅತಿಕ್ರಮಣ ರೈತರಿಗೆ ಪಟ್ಟಾ ನೀಡುವುದು ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರು ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ತಾಲ್ಲೂಕಿನ ಬಾಚಣಕಿ ಗ್ರಾಮದ ದೇವಸ್ಥಾನದ ಆವರಣದಲ್ಲಿ ನಡೆದ ರೈತ ಸಭೆಯಲ್ಲಿ ಮನವಿ ನೀಡಲಾಯಿತು.

ರೈತರ ಬೋರ್‌ವೆಲ್‌ಗಳಿಗೆ ಮೀಟರ್ ಆಳವಡಿಸುವುದು ಹಾಗೂ ವಿದ್ಯುತ್‌ ಅನ್ನು ಖಾಸಗೀಕರಣ ಪ್ರಸ್ತಾವ ಕೈಬಿಡಬೇಕು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ, ಖರೀದಿ ಕೇಂದ್ರ ತೆರೆಯಬೇಕು. ಬಾಚಣಕಿ ಗ್ರಾಮದ ಎಲ್ಲಾ ರೈತರ ಜಮೀನುಗಳಿಗೆ ಜಲಾಶಯದ ನೀರಿನ ಸೌಲಭ್ಯ ಕಲ್ಪಿಸಬೇಕು' ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಅತಿವೃಷ್ಟಿ, ಅನಾವೃಷ್ಟಿಯಿಂದ ಹಾಗೂ ಕಾಡು ಪ್ರಾಣಿಗಳಿಂದ ಬೆಳೆಹಾನಿಯಾದ ರೈತರಿಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.