ಕಾರವಾರ: ಮಂಗಳೂರಿನಲ್ಲಿ ಈಚೆಗೆ ಸುಹಾಸ್ ಶೆಟ್ಟಿ ಎಂಬುವವರನ್ನು ಹತ್ಯೆ ಮಾಡಿರುವ ಘಟನೆ ಖಂಡಿಸಿ ಹಿಂದೂ ಸಂಘಟನೆಗಳ ಸಮಾನ ಮನಸ್ಕರ ವೇದಿಕೆ ಬುಧವಾರ ಕರೆ ನೀಡಿದ್ದ ಕಾರವಾರ ಬಂದ್'ಗೆ ಸ್ಪಂದನೆ ಸಿಕ್ಕಿದೆ.
ನಗರದಲ್ಲಿನ ಅಂಗಡಿ ಮುಂಗಟ್ಟುಗಳು, ಖಾಸಗಿ ಸಂಸ್ಥೆಗಳ ಕಚೇರಿಗಳು ಬಾಗಿಲು ಮುಚ್ಚಿವೆ. ಆಟೊ ಸಂಚಾರ ಕೂಡ ಬಹುತೇಕ ಸ್ಥಗಿತಗೊಂಡಿದೆ. ತುರ್ತು ಅಗತ್ಯವಿದ್ದ ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಲು ಸೀಮಿತ ಸಂಖ್ಯೆಯ ಆಟೊಗಳು ಸಂಚರಿಸುತ್ತಿವೆ.
ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ತೆರೆದಿರುವುದರಿಂದ ಜನ ಸಂಚಾರ ಸಹಜವಾಗಿದೆ.
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಸಮಾನ ಮನಸ್ಕರ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಮುಖ್ಯ ರಸ್ತೆಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.