ADVERTISEMENT

ಕಾರವಾರ | ಅಪಘಾತ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 3:56 IST
Last Updated 14 ನವೆಂಬರ್ 2025, 3:56 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಕಾರವಾರ: ಇಲ್ಲಿನ ಆರ್‌ಟಿಒ ಕಚೇರಿ ಎದುರಿನ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯವಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಮಾಜಾಳಿ ಗ್ರಾಮದ ಚಿರಂಜೀವಿ ಕುಂಜಿ ಮೃತ ಯುವಕ. ತಾಯಿಯೊಂದಿಗೆ ಸ್ಕೂಟರ್‌ನಲ್ಲಿ ಬರುವಾಗ ಎದುರಿನಿಂದ ಕ್ರಿಮ್ಸ್‌ನ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಚಿರಂಜೀವಿ ಸ್ಥಳದಲ್ಲೇ ಮೃತಪಟ್ಟರೆ, ವೈದ್ಯಕೀಯ ವಿದ್ಯಾರ್ಥಿಗಳಾದ ಲೋಹಿತ್ ಮತ್ತು ಶಿವದರ್ಶನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.