ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಯೋಜಕ ಸದಸ್ಯ ಶಿವಾನಂದ ತಾಮ್ರೆಣ್ಣನವರ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು
ಕಾರವಾರ: ಲಂಚ ಪಡೆಯು ವೇಳೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶಿವಾನಂದ ತಾಮ್ರೇನವರ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಇಲ್ಲಿನ ಕಾಜುಬಾಗದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ₹10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದರು.
ಖಾಸಗಿ ಎಂಜಿನಿಯರ್ ಪ್ರಸನ್ನ ನಾಯ್ಕ ಎಂಬುವವರು ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಲಂಚ ಕೇಳಿದ್ದಾಗಿ ನೀಡಿದ್ದ ದೂರು ಆಧರಿಸಿ ಲೋಕಾಯುಕ್ತ ಎಸ್.ಪಿ ಕುಮಾರಚಂದ್ರ ನೇತೃತ್ವದ ತಂಡ ದಾಳಿ ನಡೆಸಿತ್ತು.
'ಜನವರಿಯಲ್ಲಿ ಅರ್ಜಿದಾರರು ಪರವಾನಗಿಗೆ ಅರ್ಜಿ ಸಲ್ಲಿಸಿದರೂ ಆರೋಪಿ ಕೆಲಸ ಮಾಡಿಕೊಟ್ಟಿರಲಿಲ್ಲ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು' ಎಂದು ಲೋಕಾಯುಕ್ತ ಎಸ್.ಪಿ ಕುಮಾರಚಂದ್ರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.