ADVERTISEMENT

 ಕಾರವಾರ: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2019, 9:53 IST
Last Updated 23 ಜೂನ್ 2019, 9:53 IST
   

ಅಂಕೋಲಾ: ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಭಾರಿ ಮಳೆ ಸುರಿದು ಜಲಾವೃತವಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಗಂಗಾವಳಿ ನದಿ ಪಾತ್ರದಲ್ಲಿರುವ ವಾಸರೆ, ಕೊಡ್ಸಣಿ ಮತ್ತು ಕುರ್ವೆ ದ್ವೀಪಗಳಲ್ಲಿ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿತ್ತು. ಪೂಜಗೇರಿ ಹಳ್ಳ ಉಕ್ಕಿ ಹರಿದು ಪೂಜಗೇರಿ ಮತ್ತು ನದಿಬಾಗ ಗ್ರಾಮಗಳಲ್ಲಿ ಕೃಷಿ ಭೂಮಿ ಮತ್ತು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಈ ಬಗ್ಗೆ 'ಪ್ರಜಾವಾಣಿ'ಯ ಭಾನುವಾರದ ಸಂಚಿಕೆಯಲ್ಲಿ ವಿಸ್ತೃತವಾದ ವರದಿ ಪ್ರಕಟವಾಗಿತ್ತು.

ADVERTISEMENT

ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ, 'ಜಿಲ್ಲಾ ಉಸ್ತುವಾರಿ ಸಚಿವರು ನನಗೆ ಕರೆ ಮಾಡಿ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಕೊಡಲೇ ಕ್ರಮ ಕೈಗೊಳ್ಳಲು ತಿಳಿಸಿದರು. ಯಾವುದೇ ಪ್ರದೇಶದಲ್ಲಿ ನೈಸರ್ಗಿಕವಾಗಿ ನೀರು ಸರಾಗವಾಗಿ ಹರಿಯಲು ಅನುವು ಮಾಡಿಕೊಡಬೇಕು. ಇದಕ್ಕೆ ಜನರು ಸ್ವಾರ್ಥಕ್ಕಾಗಿ ಅಡ್ಡಿಪಡಿಸಿದರೆ ನಾವು ಸಹಿಸುವುದಿಲ್ಲ' ಎಂದು ಪುರಸಭೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ತಹಶೀಲ್ದಾರ ವಿವೇಕ್ ಶೇಣ್ವಿ, ಪುರಸಭೆ ಮುಖ್ಯಾಧಿಕಾರಿ ಡಿ.ಪ್ರಹ್ಲಾದ್, ಉಪ ವಿಭಾಗಾಧಿಕಾರಿ ಸಾಜಿದ್ ಮುಲ್ಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.