ಲಾಟರಿ ಟಿಕೆಟ್
ಕಾರವಾರ: ‘ಉತ್ಸವ, ಕಾರ್ಯಕ್ರಮಗಳ ಹೆಸರಿನಲ್ಲಿ ಲಕ್ಕಿ ಡ್ರಾ ಲಾಟರಿ ನಡೆಸುವುದು ಗಮನಕ್ಕೆ ಬಂದರೆ ತಕ್ಷಣ ಪೊಲೀಸರಿಗೆ ದೂರು ನೀಡಿ’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
‘ಜಿಲ್ಲೆಯಲ್ಲಿ ಲಾಟರಿ ಚಟುವಟಿಕೆ ನಡೆಯದಂತೆ ನಿಗಾ ಇಡಲು ವಿಚಕ್ಷಣಾ ದಳ (ಫ್ಲೈಯಿಂಗ್ ಸ್ಕ್ಯಾಡ್) ರಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರ ಸೇರಿದಂತೆ ವಿವಿಧ ಅಧಿಕಾರಿಗಳು ಈ ತಂಡದಲ್ಲಿ ಇರಲಿದ್ದಾರೆ. ಲಾಟರಿ ಚಟುವಟಿಕೆ ನಡೆಯುತ್ತಿರುವುದು ಗಮನಕ್ಕೆ ಬಂದರೆ ಪ್ರಕರಣ ದಾಖಲಿಸಿ, ಕ್ರಮವಹಿಸಲಾಗುವುದು’ ಎಂದು ತಿಳಿಸಿದ್ದಾರೆ.
‘ಅಭಿವೃದ್ಧಿ, ಬಹುಮಾನ ಯೋಜನೆ, ಹಬ್ಬ-ಉತ್ಸವ ಕಾರ್ಯಕ್ರಮದ ಹೆಸರಿನಲ್ಲಿ, ಲಾಟರಿ ಟಿಕೇಟ್‌ಗಳನ್ನು ಮುದ್ರಿಸುವುದು, ಮಾರಾಟ ಮಾಡುವುದು, ಖರೀದಿಸುವುದು ಅಪರಾಧವಾಗಿರುತ್ತದೆ’ ಎಂದೂ ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.