
ಕಾರವಾರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಂಜೂರಾಗಿರುವ ಕುಡಿಯುವ ನೀರಿನ ಕ್ರಿಯಾ ಯೋಜನೆಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಸಿದ ಅವರು, ‘ಶಾಸಕರ ಅಧ್ಯಕ್ಷತೆಯಲ್ಲಿನ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಅನುಮೋದನೆ ನೀಡಿದೆ. ಅಂತಹ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದರು.
ನಿಧಾನಗತಿಯಲ್ಲಿ ನಡೆಯುತ್ತಿರುವ, ಈವರೆಗೂ ಆರಂಭವೇ ಆಗದ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು. ತಾಂತರಿಕ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಭಕ್ಷ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಸತ್ಯಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.