
ಪ್ರಜಾವಾಣಿ ವಾರ್ತೆ
ಕಾರವಾರ: ತಾಲ್ಲೂಕಿನ ಮುಡಗೇರಿ ಗ್ರಾಮದ ಅರಣ್ಯ ಮಾರ್ಗದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯದ ದಾಸ್ತಾನನ್ನು ಅಬಕಾರಿ ಅಧಿಕಾರಿಗಳ ತಂಡ ಸೋಮವಾರ ವಶಕ್ಕೆ ಪಡೆದಿದೆ.
‘ದ್ವಿಚಕ್ರ ವಾಹನದಲ್ಲಿ ಮದ್ಯ ಸಾಗಿಸುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಆರೋಪಿಯು ಪರಾರಿಯಾಗಿದ್ದು, ಮದ್ಯ ಸಾಗಣೆಗೆ ಬಳಸಿದ್ದ ದ್ವಿಚಕ್ರ ವಾಹನ ಮತ್ತು ₹66,700 ಮೌಲ್ಯದ ಗೋವಾ ಮದ್ಯ ದಾಸ್ತಾನು ವಶಕ್ಕೆ ಪಡೆಯಲಾಗಿದೆ’ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.