ADVERTISEMENT

ಕಾರವಾರ | ಹಾಸ್ಟೆಲ್ ಅವ್ಯವಸ್ಥೆ: ವಿದ್ಯಾರ್ಥಿನಿಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 5:25 IST
Last Updated 11 ಅಕ್ಟೋಬರ್ 2025, 5:25 IST
ಕಾರವಾರದ ಬಾಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿನ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರೊಂದಿಗೆ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಕ್ಕ ಮಾದರ, ತಹಶೀಲ್ದಾರ್ ನಿಶ್ಚಲ್ ನೊರ್‍ಹೋನಾ ಚರ್ಚಿಸಿದರು
ಕಾರವಾರದ ಬಾಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿನ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರೊಂದಿಗೆ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಕ್ಕ ಮಾದರ, ತಹಶೀಲ್ದಾರ್ ನಿಶ್ಚಲ್ ನೊರ್‍ಹೋನಾ ಚರ್ಚಿಸಿದರು   

ಕಾರವಾರ: ಇಲ್ಲಿನ ಬಾಡದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.

‘ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರಿಂದ ಕೊಠಡಿ, ಶೌಚಾಲಯ ಶುಚಿಗೊಳಿಸಲಾಗುತ್ತಿದೆ. ಅಡುಗೆಗೆ ತಾಜಾ ತರಕಾರಿ, ದಿನಸಿ ಬಳಸುತ್ತಿಲ್ಲ’ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ, ‘ವಸತಿ ನಿಲಯದಲ್ಲಿ ಪ್ರವೇಶಾತಿ ಪಡೆಯುವವರು ಬಡ ಕುಟುಂಬದ ಮಕ್ಕಳು. ಶಿಕ್ಷಣಕ್ಕಾಗಿ ದೂರದ ಊರುಗಳಿಂದ ಬಂದು ನೆಲೆಸಿರುವ ಅವರನ್ನು ದುಡಿಮೆಗೆ ಹಚ್ಚುವ ಪದ್ಧತಿ ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ’ ಎಂದರು.

ADVERTISEMENT

‘ವಿದ್ಯಾರ್ಥಿನಿಯರಿಗೆ ಕಿರುಕುಳ ಉಂಟಾಗುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿದ್ದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ವಸತಿ ನಿಲಯದಲ್ಲಿ ವಿದ್ಯಾರ್ಥಿ ಸ್ನೇಹಿ ವಾತಾವರಣ ಕಾಯ್ದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನಾನಿರತರ ಸಮಸ್ಯೆ ಆಲಿಸಲು ಸ್ಥಳಕ್ಕೆ ಬಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಕ್ಕ ಮಾದರ ಮತ್ತು ತಹಶೀಲ್ದಾರ್ ನಿಶ್ಚಲ್ ನೊರ‍್ಹೋನಾ ವಸತಿ ನಿಲಯದಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.