ADVERTISEMENT

ಕದಂಬ ನೌಕಾನೆಲೆ: INS Vagsheer ಸಬ್‌ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಪಯಣ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 6:55 IST
Last Updated 28 ಡಿಸೆಂಬರ್ 2025, 6:55 IST
<div class="paragraphs"><p>ಕದಂಬ ನೌಕಾನೆಲೆ: INS Vagsheer ಸಬ್‌ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಪಯಣ</p></div>

ಕದಂಬ ನೌಕಾನೆಲೆ: INS Vagsheer ಸಬ್‌ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಪಯಣ

   

ಕಾರವಾರ: ಇಲ್ಲಿನ ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಗ್ಶೀರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು.

ಗೋವಾದಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ನೌಕಾದಲದ ವಿಶೇಷ ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಬಂದಿಳಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಬರಮಾಡಿಕೊಂಡರು.

ADVERTISEMENT

ಬಳಿಕ ಜಲಾಂತರ್ಗಾಮಿ ನೌಕೆಯ ಬಳಿ ತೆರಳಿದ ಅವರು ನೌಕಾದಳದ ಸಿಬ್ಬಂದಿಯತ್ತ ಕೈಬೀಸುತ್ತ ಜಲಮಾಂತರ್ಗಾಮಿ ನೌಕೆಯೊಳಗೆ ತೆರಳಿದರು. ಸಮುದ್ರದ ಆಳದಲ್ಲಿ ನೌಕೆ ಸಂಚರಿಸುತ್ತಿದ್ದು, ತಾಸಿಗೂ ಹೆಚ್ಚು ಕಾಲ ರಾಷ್ಟ್ರಪತಿ ನೌಕೆಯೊಳಗೆ ಸಂಚರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.