
ಪ್ರಜಾವಾಣಿ ವಾರ್ತೆ
ಕಾರವಾರ: ಜೀಪ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.26ಲಕ್ಷ ಮೌಲ್ಯದ ಗೋವಾ ಮದ್ಯವನ್ನು ತಾಲ್ಲೂಕಿನ ಚೆಂಚೆವಾಡಾದ ಐಸ್ ಫ್ಯಾಕ್ಟರಿ ಸಮೀಪ ಸೋಮವಾರ ರಾತ್ರಿ ಚಿತ್ತಾಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಗೋವಾದಿಂದ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ವಿವಿಧ ಬ್ರ್ಯಾಂಡುಗಳ ಮದ್ಯ ದಾಸ್ತಾನನ್ನು ವಶಕ್ಕೆ ಪಡೆಯಲಾಗಿದೆ. ಸಾಗಾಟ ಮಾಡುತ್ತಿದ್ದ ಹುಬ್ಬಳ್ಳಿಯ ನೆಹರು ನಗರದ ನಾರಾಯಣ ಗಜಾನನ ದಲಬಂಜನ್ (30) ಎಂಬಾತನನ್ನು ಬಂಧಿಸಲಾಗಿದೆ. ಆತ ಸಾಗಾಟಕ್ಕೆ ಬಳಸಿದ್ದ ವಾಹನ ಮತ್ತು ಮದ್ಯ ದಾಸ್ತಾನನ್ನು ವಶಕ್ಕೆ ಪಡೆದಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.