ADVERTISEMENT

1.04 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ ಗುರಿ: ಹೆಚ್ಚುವರಿ ಡಿಸಿ ಸಾಜಿದ್ ಮುಲ್ಲಾ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 4:50 IST
Last Updated 17 ಡಿಸೆಂಬರ್ 2025, 4:50 IST
<div class="paragraphs"><p>ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಬಿಡುಗಡೆಗೊಳಿಸಿದರು. </p></div>

ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಬಿಡುಗಡೆಗೊಳಿಸಿದರು.

   

ಕಾರವಾರ: ‘ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನವು ಡಿ.21ರಿಂದ 24ರವೆಗೆ ನಡೆಯಲ್ಲಿದ್ದು, 878 ಕೇಂದ್ರಗಳ ಮೂಲಕ 1,04,581 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

ADVERTISEMENT

‘21ರಂದು ಗೊತ್ತು ಪಡಿಸಿರುವ ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆಯನ್ನು ನೀಡಲಾಗುತ್ತದೆ. 22ರಿಂದ 23ರವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ 22ರಿಂದ 24ರವರೆಗೆ ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ಮೂಲಕ ಆರೋಗ್ಯ ಕಾರ್ಯಕರ್ತರು ಲಸಿಕೆ ನೀಡಬೇಕು’ ಎಂದರು.

‘ಕಟ್ಟಡ ಕಾರ್ಮಿಕರ ಮಕ್ಕಳು, ವಲಸೆ ಬಂದ ಕುಟುಂಬ ಮತ್ತು ಕೊಳಚೆ ಪ್ರದೇಶದಲ್ಲಿ ವಾಸವಿರುವ ಮಕ್ಕಳು ಪೋಲಿಯೊ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು’ ಎಂದರು.

‘ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್‌ಗಳನ್ನು ತಯಾರಿಸಲು ನಿರಂತರ ವಿದ್ಯುತ್ ಪೂರೈಕೆಯ ಅವಶ್ಯಕತೆ ಇರುವುದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಪ್ರದೇಶಗಳಲ್ಲಿ ಡಿ.17ರಿಂದ ವಿದ್ಯುತ್ ಕಡಿತಗೊಳಿಸಬಾರದು’ ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಜಿಲ್ಲಾ ಆರೋಗ್ಯಾಕಾರಿ ಡಾ.ನೀರಜ್ ಬಿ.ವಿ, ಆರ್‌ಸಿಎಚ್ ಅಧಿಕಾರಿ ಡಾ.ನಟರಾಜ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯಕ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಹರ್ಷಾ, ಜಿಲ್ಲಾ ಕುಷ್ಠ್ಟರೋಗ ನಿರ್ಮೂಲನಾಧಿಕಾರಿ ಡಾ.ಶಂಕರ ರಾವ್, ಜಿಲ್ಲಾರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕ್ಯಾಪ್ಟನ್ ರಮೇಶ ರಾವ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿದೇರ್ಶಕ ಉಮೇಶ ವೈ.ಕೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.