ADVERTISEMENT

ಕಾರವಾರ: ಮುಂದುವರಿದ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2020, 10:51 IST
Last Updated 4 ಜುಲೈ 2020, 10:51 IST
ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರಕ್ಕೆ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದಾಗ ಮೀನುಗಾರರು ದೋಣಿಯಲ್ಲಿ ಸಾಗಿದರು. ಪ್ರಜಾವಾಣಿ ಚಿತ್ರ: ದಿಲೀಪ ರೇವಣಕರ್  
ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರಕ್ಕೆ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದಾಗ ಮೀನುಗಾರರು ದೋಣಿಯಲ್ಲಿ ಸಾಗಿದರು. ಪ್ರಜಾವಾಣಿ ಚಿತ್ರ: ದಿಲೀಪ ರೇವಣಕರ್     

ಕಾರವಾರ: ಜಿಲ್ಲೆಯಾದ್ಯಂತ ಶನಿವಾರವೂ ಉತ್ತಮ ಪ್ರಮಾಣದಲ್ಲಿ ಮಳೆಯಾಯಿತು. ಕರಾವಳಿಯಲ್ಲಿ ಒಂದೆರಡು ಬಾರಿ ಧಾರಾಕಾರ ಸುರಿದರೆ,ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಆಗಾಗ ಸಾಧಾರಣ ಮಳೆ ಬಂತು.

ಕಾರವಾರ, ಅಂಕೋಲಾ ಸುತ್ತಮುತ್ತ ಶುಕ್ರವಾರ ಸಂಜೆ ಶುರುವಾದ ಮಳೆಯು ನಡುವೆ ಸ್ವಲ್ಪ ಬಿಡುವು ನೀಡುತ್ತಬಿರುಸಾಗಿ ಸುರಿಯಿತು. ಶಿರಸಿ, ಸಿದ್ದಾಪುರ, ಮುಂಡಗೋಡ, ಯಲ್ಲಾಪುರದಲ್ಲಿ ಕೂಡ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮುಂಗಾರು ಚುರುಕಾಗಿರುವ ಕಾರಣ ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ದಡಕ್ಕೆ ದೊಡ್ಡ ಅಲೆಗಳು ಅಪ್ಪಳಿಸುತ್ತಿವೆ.

ಶುಕ್ರವಾರ ಬೆಳಿಗ್ಗೆ 8ರಿಂದ ಶನಿವಾರ ಬೆಳಿಗ್ಗೆ 8ರ ಅವಧಿಯಲ್ಲಿ ಕಾರವಾರದಲ್ಲಿ 11.9 ಸೆಂಟಿಮೀಟರ್ ಮಳೆಯಾಗಿದೆ. ಹೊನ್ನಾವರದಲ್ಲಿ 7.9 ಸೆಂಟಿಮೀಟರ್ ಹಾಗೂ ಕುಮಟಾದಲ್ಲಿ 7.4 ಸೆಂಟಿಮೀಟರ್ ಮಳೆಯಾಗಿದೆ.

ADVERTISEMENT

ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಇದೇ ರೀತಿಯ ವಾತಾವರಣ ಇರಲಿದ್ದು, ಆಗಾಗ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವೆಬ್‌ಸೈಟ್‌ನಲ್ಲಿ ಮುನ್ಸೂಚನೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.