
ಕಾರವಾರ: ಇಲ್ಲಿನ ಕಾರವಾರ ಅರ್ಬನ್ ಕೋ–ಆಪ್ ಬ್ಯಾಂಕ್‌ನಲ್ಲಿ ಅಂದಾಜು ₹ 54 ಕೋಟಿಯಷ್ಟು ವಂಚನೆ ನಡೆದಿದ್ದು, ಎಂಟು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಗುರುದಾಸ ಬಾಂದೇಕರ ಎಂಬುವರು ಇದಕ್ಕೆ ಕಾರಣವೆಂದು ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಹಾಸ ಸ್ವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
‘2014 ರಿಂದಲೂ ಬ್ಯಾಂಕಿನ ನಿಯಮಾವಳಿಗೆ ವಿರುದ್ಧವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ಜಮಾ ಆಗಿದೆ. ಬಿಲ್ಡರ್, ಉದ್ಯಮಿಗಳು ಸೇರಿದಂತೆ ಹಲವರಿಗೆ ಬ್ಯಾಂಕ್ ನಿಯಮಾವಳಿ ಪಾಲಿಸದೆ ಹಣ ವರ್ಗಾಯಿಸಲಾಗಿದೆ. ಇದರಲ್ಲಿ ಪ್ರಧಾನ ವ್ಯವಸ್ಥಾಪಕ, ಶಾಖಾ ವ್ಯವಸ್ಥಾಪಕರು ಶಾಮೀಲಾಗಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
‘ಹತ್ತು ವರ್ಷಗಳ ಆಡಿಟ್ ವರದಿ ಸೇರಿದಂತೆ ಹಲವು ದಾಖಲೆಗಳನ್ನು ಬ್ಯಾಂಕ್ ಪೂರೈಸಬೇಕಿದೆ. ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಎಫ್.ಐ.ಆರ್ ದಾಖಲು ಮಾಡಿಕೊಳ್ಳಬೇಕಾಗುತ್ತದೆ’ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.