ADVERTISEMENT

ಕಾರವಾರ: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 9:07 IST
Last Updated 28 ಸೆಪ್ಟೆಂಬರ್ 2020, 9:07 IST
ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕಾರವಾರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕಾರವಾರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.    

ಕಾರವಾರ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಿಐಟಿಯು, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕಾರವಾರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ನಗರದ ಲಂಡನ್ ಬ್ರಿಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರ ತಡೆಯಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಕುಳಿತು ಮನವಿ ಸಲ್ಲಿಸಲಾಯಿತು.

ಸಿದ್ದಾಪುರದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಶಿರಸಿ, ಮುಂಡಗೋಡ, ಹಳಿಯಾಳ, ಕುಮಟಾದಲ್ಲಿ ಕೂಡ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಉಳಿದಂತೆ, ಜಿಲ್ಲೆಯಾದ್ಯಂತ ಬಸ್, ಇತರ ವಾಹನಗಳ ಸಂಚಾರ ಎಂದಿನಂತೆ ಇದ್ದು, ಜನಜೀವನ ಸಹಜವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.