
ಪ್ರಜಾವಾಣಿ ವಾರ್ತೆ
ಕಾರವಾರ: ತಾಲ್ಲೂಕಿನ ಕದ್ರಾ ಕೆಪಿಸಿ ಕಾಲೊನಿಯಲ್ಲಿ ಯುವತಿಯೊಬ್ಬಳು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ಕದ್ರಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರಿಶೇಲ್ ಕಿಸ್ತೋದ್ ಫರ್ನಾಂಡಿಸ್ (20) ಮೃತೆ. ಈಕೆ ಆತ್ಮಹತ್ಯೆ ಮಾಡಿಕೊಳ್ಳಲು ನಂದನಗದ್ದಾದ ಚಿರಾಗ್ ಚಂದ್ರಹಾಸ ಕೊಠಾರಕರ ಎಂಬ ಯುವಕ ಕಾರಣ ಎಂದು ಯುವತಿಯ ಕುಟುಂಬ ದೂರಿದೆ. ಯುವಕನ ವಿರುದ್ಧ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.