ADVERTISEMENT

ಕಾರವಾರ | ತಾಲ್ಲೂಕು ಸಾಹಿತ್ಯ ಸಮ್ಮೇಳನ ಫೆ.21ಕ್ಕೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 7:31 IST
Last Updated 16 ಜನವರಿ 2026, 7:31 IST
ಕಾರವಾರದ ಕನ್ನಡ ಭವನದಲ್ಲಿ ಕಸಾಪ ತಾಲ್ಲೂಕು ಘಟಕದ ಕಾರ್ಯಕಾರಿ ಮಂಡಳಿ ಸಭೆ ನಡೆಯಿತು
ಕಾರವಾರದ ಕನ್ನಡ ಭವನದಲ್ಲಿ ಕಸಾಪ ತಾಲ್ಲೂಕು ಘಟಕದ ಕಾರ್ಯಕಾರಿ ಮಂಡಳಿ ಸಭೆ ನಡೆಯಿತು   

ಕಾರವಾರ: ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.21ರಂದು ಇಲ್ಲಿನ ಬಾಡದ ಶಿವಾಜಿ ಶಿಕ್ಷಣ ಸಂಸ್ಥೆಯ ಬಾಬಿ ಸಾವಂತ ಸಭಾಭವನದಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್‌ನ ತಾಲ್ಲೂಕು ಘಟಕದ ಕಾರ್ಯಕಾರಿ ಮಂಡಳಿ ನಿರ್ಧರಿಸಿದೆ.

ಇಲ್ಲಿನ ಕನ್ನಡ ಭವನದಲ್ಲಿ ಈಚೆಗೆ ಆಜೀವ ಸದಸ್ಯರೊಂದಿಗೆ ಮಂಡಳಿ ನಡೆಸಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾ ನಾಯ್ಕ ತಿಳಿಸಿದ್ದಾರೆ.

‘ಶಾಸಕ ಸತೀಶ ಸೈಲ್ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿದ್ದು, ಕಾರ್ಯಾಧ್ಯಕ್ಷರನ್ನಾಗಿ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗೆ ಏಳು ಸದಸ್ಯರ ಉಪಸಮಿತಿ ರಚಿಸಲಾಗಿದೆ. ಮುಂದಿನ ಒಂದೆರಡು ದಿನದೊಳಗೆ ಸಮಿತಿ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಲಿದೆ’ ಎಂದು ಹೇಳಿದ್ದಾರೆ.

ADVERTISEMENT

ಸಮ್ಮೇಳನದ ರೂಪುರೇಷೆಗಳ ಕುರಿತು ಜಿ.ಡಿ.ಮನೋಜೆ ವಿವರಿಸಿದರು. ಸಭೆಯಲ್ಲಿ ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್, ವಿನಾಯಕ ನಾಯಕ, ಬಾಬು ಶೇಖ್, ಗಣೇಶ ಬಿಷ್ಟಣ್ಣನವರ, ಶಿವಾನಂದ ತಾಂಡೇಲ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.