ADVERTISEMENT

ಕೆಡಿಸಿಸಿ ಬ್ಯಾಂಕ್ ಆಡಳಿತಾಧಿಕಾರ ನೇಮಕಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ಮತ್ತೆ ಆಡಳಿತ ಮಂಡಳಿಗೆ ಅಧಿಕಾರ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 16:52 IST
Last Updated 12 ಆಗಸ್ಟ್ 2020, 16:52 IST
ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮತ್ತೆ ಅಧಿಕಾರವಹಿಸಿಕೊಂಡ ಎಸ್.ಎಲ್.ಘೋಟ್ನೇಕರ್ ಅವರು ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರನ್ನು ಸನ್ಮಾನಿಸಿದರು. ವ್ಯವಸ್ಥಾಪಕ ನಿರ್ದೇಶಕ ಎಸ್.ಬಿ.ಚೌವ್ಹಾಣ್, ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಇದ್ದಾರೆ
ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮತ್ತೆ ಅಧಿಕಾರವಹಿಸಿಕೊಂಡ ಎಸ್.ಎಲ್.ಘೋಟ್ನೇಕರ್ ಅವರು ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರನ್ನು ಸನ್ಮಾನಿಸಿದರು. ವ್ಯವಸ್ಥಾಪಕ ನಿರ್ದೇಶಕ ಎಸ್.ಬಿ.ಚೌವ್ಹಾಣ್, ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಇದ್ದಾರೆ   

ಶಿರಸಿ: ಇಲ್ಲಿನ ಕೆಡಿಸಿಸಿ ಬ್ಯಾಂಕಿಗೆ ಆಡಳಿತಾಧಿಕಾರಿ ನೇಮಕ ಸಂಬಂಧಿಸಿ, ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹೀಗಾಗಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಮತ್ತೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಕೆಡಿಸಿಸಿ ಬ್ಯಾಂಕ್ ನಿರ್ದೇಶಕರ ಅಧಿಕಾರಾವಧಿ ಪೂರ್ಣಗೊಂಡಿದ್ದರಿಂದ ಜುಲೈ 15ರಿಂದ ಇದಕ್ಕೆ ಆಡಳಿತಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರನ್ನು ನೇಮಿಸಲಾಗಿತ್ತು. ಕೋವಿಡ್ 19 ಇರುವ ಕಾರಣಕ್ಕೆ ಬ್ಯಾಂಕ್ ಚುನಾವಣೆಯನ್ನು ಡಿಸೆಂಬರ್‌ವರೆಗೆ ಮುಂದೂಡಿ ಸರ್ಕಾರ ಆದೇಶ ಹೊರಡಿಸಿತ್ತು.

ಚುನಾವಣೆ ನಡೆಯುವ ತನಕ ಹಿಂದಿನ ಆಡಳಿತ ಮಂಡಳಿಯನ್ನೇ ಮುಂದುವರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್‌, ಆಡಳಿತಾಧಿಕಾರಿ ನೇಮಕಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹೀಗಾಗಿ, ಹಿಂದಿನ ಅಧ್ಯಕ್ಷರಾಗಿದ್ದ ಎಸ್.ಎಲ್.ಘೋಟ್ನೇಕರ್ ಬುಧವಾರ ಮತ್ತೆ ಅಧಿಕಾರ ವಹಿಸಿಕೊಂಡರು. ಆಡಳಿತಾಧಿಕಾರಿಯನ್ನು ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.