ಗೋಕರ್ಣ (ಉತ್ತರ ಕನ್ನಡ): ಇಲ್ಲಿನ ಪ್ಯಾರಡೈಸ್ ಕಡಲತೀರದಲ್ಲಿ ನೀರಿಗಿಳಿದಿದ್ದ ಕೇರಳ ಮೂಲದ ಇಬ್ಬರು ನಾಪತ್ತೆಯಾಗಿದ್ದಾರೆ.
ಒಟ್ಟು ಐವರು ಶನಿವಾರ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕಡಲತೀರಕ್ಕೆ ತೆರಳಿ, ಸಮುದ್ರದಲ್ಲಿ ಈಜಲು ಇಳಿದಿದ್ದಾರೆ.
ಅವರಲ್ಲಿ ಇಬ್ಬರು ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ. ಸ್ಥಳೀಯರು ಮತ್ತು ಪೊಲೀಸರಿಂದ ಅವರ ಪತ್ತೆಗಾಗಿ ತೀವ್ರ ಹುಡುಕಾಟ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.